ರಾಷ್ಟ್ರೀಯ ಹಾಕಿ ಆಟಗಾರ್ತಿ ಕು. ಪೂಜಿತ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ಸನ್ಮಾನ :

ಗ್ರಾಮೀಣ ಪ್ರದೇಶದ ವರಾಹಿ ಸಾವೆಹಕ್ಲು ಮುಳುಗಡೆ  ಸಂತ್ರಸ್ಥರ ಕಡು ಬಡತನದ ಕುಟುಂಬದಲ್ಲಿ ಹುಟ್ಟಿ ಪ್ರಾಥಮಿಕ ಶಿಕ್ಷಣ ವನ್ನು ಸರಕಾರಿ ಶಾಲೆಯಲ್ಲಿ ಪಡೆದು ನಂತರ ಕ್ರೀಡಾ ಶಾಲೆಗೆ ಸೇರಿ ಕಠಿಣ  ಪರಿಶ್ರಮ ನಿರಂತರ ಅಭ್ಯಾಸದ  ಮೂಲಕ  ಇಂದು ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಪೂಜಿತ ಗೌಡ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ ಪೂಜಿತ ರವರ ಸ್ವ-ಗೃಹದಲ್ಲಿ ಅಭಿನಂದಿಸಿ ಗೌರವಿಸಿಲಾಯಿತು.

ಇದೇ ಸಂಧರ್ಭದಲ್ಲಿ ಪೂಜಿತ ರವರನ್ನು ಬೆಂಬಲಿಸಿ ರಾಷ್ಟ್ರ ಮಟ್ಟದ ಕ್ರೀಡಾಪಟುವಾಗಿ ಬೆಳಗಿ ನಾಡಿಗೆ ಕೀರ್ತಿ ತರಲು ಶ್ರಮಿಸಿದ ಪೋಷಕರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ಸನ್ಮಾನಿಸಿ ಗೌರವಿಸಲಾಯಿತು.


ಈ ಸಂಧರ್ಭದಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದವರೊಂದಿಗೆ  ಮಾತನಾಡಿದ ಪೂಜಿತ ಇದುವರೆಗೆ 19 ಬಾರಿ ರಾಷ್ಟ್ರ ಮಟ್ಟದ ಹಾಕಿ  ಕ್ರೀಡಾ ಕೂಟದಲ್ಲಿ  ಭಾಗವಹಿಸುವ ಅವಕಾಶ ದೊರೆತಿದ್ದು ಮುಂದಿನ ದಿನಗಳಲ್ಲಿ ಭಾರತ ದೇಶದ ಪರವಾಗಿ ಅಂತರ್ ರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾ ಕೂಟದಲ್ಲಿ   ಭಾಗವಹಿಸಿ ಭಾರತ ಹಾಗೂ ಕರ್ನಾಟಕದ ಹಾಕಿ  ಕ್ರೀಡೆಯ ಪತಾಕೆಯನ್ನು ಹಾರಿಸಬೇಕೆಂಬ ಅಭಿಲಾಷೆಯನ್ನು  ಹಂಚಿಕೊಂಡರು.

ರಿಪ್ಪನ್‌ಪೇಟೆ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರ ಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ.ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ.

ರಿಪ್ಪನ್ ಪೇಟೆಯ ಬರುವೆ ಗ್ರಾಮದ ಕಡು ಬಡ ಕುಟುಂಬದಲ್ಲಿ ಜನಿಸಿ ಕಷ್ಟ ಸುಖ, ನೋವುಗಳನ್ನು ನೋಡಿ ಕೃಷಿ ಆಧರಿಸಿ ಜೀವನ ಸಾಗಿಸಿಕೊಂಡು ಬಂದಂತಹ  ನಾಗೇಶ್ ಗೌಡ ಪತ್ನಿ ಪೂರ್ಣಿಮಾ ಈ ದಂಪತಿಗಳ ಮಗಳಾದ ಕುಮಾರಿ ಪೂಜಿತ ಇಂದು ರಾಷ್ಟ್ರಮಟ್ಟದಲ್ಲಿ ರಿಪ್ಪನ್ ಪೇಟೆಯ ಕೀರ್ತಿಪತಾಕೆಯನ್ನು  ಕ್ರೀಡಾಲೋಕದಲ್ಲಿ ಹಾರಿಸುತ್ತಿದ್ದಾಳೆ..

ಹೆಚ್ಚು ಅನುಕೂಲಸ್ಥರು ಅಲ್ಲದಿದ್ದರು ತನ್ನ ಮಗಳು ಈ ನಾಡಿಗೆ ಏನಾದರೂ ತನ್ನದೇ ಆದ ಸೇವೆ ಸಲ್ಲಿಸಬೇಕು ಎಂಬ ತಂದೆ-ತಾಯಿಯರ ಕನಸನ್ನು ಇಂದು ಪೂಜಿತ ನನಸಾಗಿಸಿದ್ದಾಳೆ.


ಕುಮಾರಿ ಪೂಜಿತಾ  ತನ್ನ ಬಾಲ್ಯದ ಜೀವನವನ್ನು ರಿಪ್ಪನ್ ಪೇಟೆಯ ಸರಕಾರಿ ಬಾಲಕಿಯರ ಪಾಠಶಾಲೆಯಲ್ಲಿ ವ್ಯಾಸಂಗ ಮಾಡಿ ಮುಂದಿನ ವ್ಯಾಸಂಗಕ್ಕಾಗಿ ಶಿವಮೊಗ್ಗದ ಕ್ರೀಡಾ ಹಾಸ್ಟೆಲ್ ನಲ್ಲಿ  5 ನೇ ತರಗತಿ ಯಿಂದ ಏಳನೇ ತರಗತಿಯವರೆಗೆ ನಂತರ ಎಂಟರಿಂದ 10ನೇ ತರಗತಿ ಕ್ರೀಡಾ ಹಾಸ್ಟೆಲ್ ಮಡಿಕೇರಿಯಲ್ಲಿ ವ್ಯಾಸಂಗ ಮಾಡಿ ಪದವಿಯನ್ನು ಥೆರೆಶಿಯನ್ ಕಾಲೇಜ್ ಮೈಸೂರಿನಲ್ಲಿ ಮುಗಿಸಿದ್ದಾರೆ.


ಈಕೆಯ ದೃಢ ಅಚಲ ಸ್ಪರ್ಧಾ ಮನೋಭಾವ ಹಾಗೂ ಈ ನಾಡಿಗೆ ಕ್ರೀಡಾ ಕ್ಷೇತ್ರದಲ್ಲಿ ಏನಾದರೂ ಸಾಧಿಸಬೇಕು ಎನ್ನುವ ಛಲ ಇಂದು ರಾಷ್ಟ್ರಮಟ್ಟದಲ್ಲಿ ಹಾಕಿ ಕ್ಷೇತ್ರದಲ್ಲಿ ಗುರುತಿಸುವಂತೆ ಮಾಡಿದೆ.

ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಹಲವಾರು ಸಮಸ್ಯೆಗಳ ಮಧ್ಯೆ ಸಾವಿರಾರು ಸ್ಪರ್ಧಾಳುಗಳ ಮಧ್ಯೆ ಸ್ಪರ್ಧಿಸಿ ಗೆದ್ದು ಜಿಲ್ಲಾ, ರಾಜ್ಯ,ಹಾಗೂ ರಾಷ್ಟ್ರಮಟ್ಟದಲ್ಲಿ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡ ಈ ಪ್ರತಿಭೆಗೆ ಅಭಿನಂದನೆಗಳು.

ರಾಷ್ಟ್ರಮಟ್ಟದ ಕ್ರೀಡಾಪಟು ಪೂಜಿತ ರವರ ಸಂದರ್ಶನದ ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

20 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

20 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

21 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago