ರಿಪ್ಪನ್‌ಪೇಟೆಯಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಮಾವೇಶ :

ರಿಪ್ಪನ್‌ಪೇಟೆ:ಸಂಘಟನಾತ್ಮಕ ಸಭೆಯನ್ನು ಬೂತ್ ಮಟ್ಟದಲ್ಲಿ ಸರ್ವಸ್ಪರ್ಶಿ ಸರ್ವವ್ಯಾಪಿ ಕಾರ್ಯಕ್ರಮದ ಸದುಪಯೋಗವನ್ನು ಕಾರ್ಯಕರ್ತರು ಮತದಾರರಿಗೆ ಮನನ ಮಾಡಬೇಕು.ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಸ್ನೇಹಿ ಕಾರ್ಯಕ್ರಮಗಳನ್ನು ಮತದಾರರಿಗೆ ರೂಪಿಸುವ ಮಹಾತ್ಕಾರ್ಯವನ್ನು ಸಂಘಟನೆಗಳು ಮಾಡಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್ ಹೇಳಿದರು.

ರಿಪ್ಪನ್‌ಪೇಟೆ ಬಿಜೆಪಿ ಕಛೇರಿಯಲ್ಲಿ ಹುಂಚ-ಕೆರೆಹಳ್ಳಿ ಮಹಾಶಕ್ತಿಕೇಂದ್ರದವರು ಆಯೋಜಿಸಲಾಗಿದ ವಿಸ್ತಾರಕ ಯೋಜನೆಯ ಅವಲೋಕನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು
ಹಿಂದಿನ ಅಟಲ್ ಬಿಹಾರಿ ವಾಜಪೇಯ ಸರ್ಕಾರದ ಅಭಿವೃದ್ಧಿ ಸಾಧನೆಗಳನ್ನು ತಿಳಿಸುವಲ್ಲಿ ವಿಫಲವಾದ ಕಾರಣ ಅಧಿಕಾರ ಕಳೆದುಕೊಳ್ಳಬೇಕಾಯಿತು ಆದರೆ ಇಂದಿನ ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಅಭಿವೃದ್ಧಿಯ ಮಾನದಂಡದೊಂದಿಗೆ ಮೌಲ್ಯಯುತ ರಾಜಕೀಯದಿಂದಾಗಿ ಒಬ್ಬ ಸಾಮಾನ್ಯ ಮತದಾರ ತನ್ನ ಹಕ್ಕು ಚಲಾವಣೆ ಮಾಡಲು ತಲೆ ಎತ್ತಿ ಎದೆ ಹಿಗ್ಗಿಸಿ ಬಂದು ತನ್ನ ಬೂತ್ ನಲ್ಲಿ ಮತದಾನ ಮಾಡುತ್ತಾನೋ ದೇಶ ಸಂವೃದ್ದಿಯಾಗುತ್ತಾ ಫಲವತ್ತಾಗುತ್ತಿರುವುದಕ್ಕೆ ಭಾರತೀಯ ಜನತಾ ಪಕ್ಷ ಸಂಘಟನ್ಮಾಕ ಅಭಿಮಾನಕ್ಕೆ ಸಾಕ್ಷಿಯಾಗಿ ಪರಿವರ್ತನೆಯ ಹಾದಿಯಲ್ಲಿ ಭಾರತದ ಪ್ರಜಾಪ್ರಭುತ್ವ ಸಾಗುತ್ತಿದೆ ಎಂದು  ಕಾರ್ಯಕರ್ತರನ್ನು ಹುರುದುಂಬಿಸಿ ಈ ಎಲ್ಲ ಸಾಧನೆಗೆ ಸಾಮಾನ್ಯ ಕಾರ್ಯಕರ್ತರ ಶ್ರಮವೇ ಸಾಕ್ಷಿಯೆಂದು ಬಣ್ಣಿಸಿದರು.

ಈಗಾಗಲೇ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನಂತರದಲ್ಲಿ ಬೋಮ್ಮಾಯಿ ನೇತೃತ್ವದ ಸರ್ಕಾರ ಅತ್ಯುತ್ತಮವಾಗಿ ಕರ್ತವ್ಯ ನಡೆಸುವ ಮೂಲಕ ಜನಮೆಚ್ಚುಗೆ ಪಡೆಯುವಂತಾಗಿ ಅಭಿವೃದ್ಧಿಯನ್ನು ಪಡಿಸಲಾಗುತ್ತಿರುವುದು ಮತ್ತು ಕ್ಷೇತ್ರದ ಶಾಸಕರು ಕ್ಷೇತ್ರದ ಪ್ರಗತಿಗೆ ಶ್ರಮಿಸುತ್ತಿದ್ದಾರೆ. ಇದನ್ನು ನಮ್ಮ ಪಕ್ಷದ ಕಾರ್ಯಕರ್ತರು ತಲೆ ಎತ್ತಿ ಹೇಳಲು ಹಿಂಜರಿಕೆ ಏಕೆ ಎಂದು ಪ್ರಶ್ನಿಸಿ ಸಾಮಾನ್ಯ ಕಾರ್ಯಕರ್ತನಿಗೂ ಪಕ್ಷ ಗುರುತಿಸಿ ಅವರನ್ನು ಎಂ.ಎಲ್.ಸಿ ರಾಜ್ಯಸಭಾ ಸದಸ್ಯರನ್ನಾಗಿ ಮಾಡುವ ಏಕೈಕ ಪಕ್ಷ ಎಂದರೆ ಬಿಜೆಪಿ ಎಂದು ಎದೆ ಉಬ್ಬಿಸಿ ಹೇಳಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹುಂಚಾ-ಕೆರೆಹಳ್ಳಿ ಬಿಜೆಪಿ ಮಹಾಶಕ್ತಿ ಕೇಂದ್ರದ ಎಂ ಬಿ ಮಂಜುನಾಥ್ ಮಾತನಾಡಿ ಬೂತ್ ಗೆದ್ದು ನಂತರ ರಾಜ್ಯ ಗೆಲ್ಲಬೇಕು ಎನ್ನುವ ದಿಸೆಯಲ್ಲಿ ಕ್ರೀಯಾಶೀಲ ಹಾಗೂ ಕ್ರೀಯಾಶೀಲರಲ್ಲದ ಕಾರ್ಯಕರ್ತರ ಸಶಸ್ತ್ರೀಕರಣ ಪ್ರಕ್ರೀಯೆ ನಡೆಸಲಾಗುತ್ತಿದೆ.ಮುಂಬರುವ ವಿಧಾನಸಭಾ ಚುನಾವಣೆ,ಜಿಪಂ ಮತ್ತು ತಾಪಂ ಚುನಾವಣೆ ಹಾಗೂ ಎಪಿಎಂಸಿ ಚುನಾವಣೆ ಇರುವ ಹಿನ್ನಲೆಯಲ್ಲಿ ಪಕ್ಷ ಬೂತ್ ಮಟ್ಟದ ಕಡೆಗೆ ಹೆಚ್ಚಿನ ಗಮನ ನೀಡಿದೆ ಹಾಗಾಗಿ ಬೂತ್ ಮಟ್ಟದ ಕಾರ್ಯಕರ್ತರು ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿರ್ವಹಿಸಬೇಕು ಇಲ್ಲದಿದ್ದಲ್ಲಿ ಜವಾಬ್ದಾರಿಯನ್ನು ಬೇರೆಯವರಿಗೆ ವಹಿಸಿಕೊಟ್ಟು ಪಕ್ಷದಲ್ಲೇ ಮುಂದುವರೆಯಬೇಕು ಎಂದರು.

ಕಾರ್ಯಕ್ರಮದಲ್ಲಿ  ತಾಲ್ಲೂಕ್ ಬಿಜೆಪಿ ಅಧ್ಯಕ್ಷ ಗಣಪತಿ ಬಿಳಗೋಡು, ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪ, ಸಂಪನ್ಮೂಲ ವ್ಯಕ್ತಿ ಸಾಗರ ಮಹೇಶ್,ಗ್ರಾಪಂ ಸದಸ್ಯ ಸುಧೀಂದ್ರ ಪೂಜಾರಿ, ನಾಗಾರ್ಜುನಸ್ವಾಮಿ, ವಿನಯ, ನಾಗೇಂದ್ರಕಲ್ಲೂರು, ದೇವೇಂದ್ರಪ್ಪಗೌಡ ನೆವಟೂರು, ಜಿ.ಪಂ.ಮಾಜಿ ಸದಸ್ಯೆ ಎ.ಟಿ.ನಾಗರತ್ನ, ಎಂ.ಸುರೇಶ್‌ಸಿಂಗ್, ಮೆಣಸೆ ಆನಂದ, ಗಿರೀಶ್‌ ಜಂಬಳ್ಳಿ, ತರಕಾರಿ ಯೋಗೇಂದ್ರಪ್ಪಗೌಡ ಇನ್ನಿತರ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

1 hour ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

2 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

16 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

16 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

23 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago