ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿದ್ದ ಕಳ್ಳತನದ ಆರೋಪಿಯೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.
ಕಳೆದ ಶನಿವಾರದಂದು ರಾತ್ರಿ ಸಾಗರ ರಸ್ತೆಯ ವಡಗೆರೆಯಲ್ಲಿರುವ ಉದ್ಯಮಿ ವೆಂಕಪ್ಪ ಶೆಟ್ಟಿ ರವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು.ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ CR 66/22, IPC 379 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಟ್ರಾಕ್ಟರ್ ಕಳ್ಳತನದ ಸಂಶಯದ ಮೇಲೆ ವಡಗೆರೆಯ ನಿವಾಸಿ ಪ್ರತಾಪ್ ರನ್ನು ಪತ್ತೆ ಮಾಡಿ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತಿತ್ತು.ಇಂದು ಬೆಳಿಗ್ಗೆ ಠಾಣೆಯಲ್ಲಿ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಹಲ್ಲೆ ಎಸಗಿ ಕಾಂಪೌಂಡ್ ಹಾರಿ ಪರಾರಿಯಾದ ಘಟನೆ ನಡೆದಿದೆ.
ಟ್ರ್ಯಾಕ್ಟರ್ ಕಳ್ಳತನ ಮಾಡಿದ ವ್ಯಕ್ತಿಯನ್ನು ಸೋಮವಾರ ಮಧ್ಯಾಹ್ನ ಸಂಶಯದ ಮೇಲೆ ವಿಚಾರಣೆಗಾಗಿ ಠಾಣೆಗೆ ಕರೆತರಲಾಗಿದ್ದು ರಾತ್ರಿಯೆಲ್ಲ ಠಾಣೆಯಲ್ಲಿಟ್ಟುಕೊಳ್ಳಲಾಗಿತ್ತು. ಇಂದು ಬೆಳಗ್ಗೆ ಶೌಚಾಲಯಕ್ಕೆ ಹೋದವನು ಹೊರಬರುತ್ತಿದ್ದಂತೆ ಅಲ್ಲೆ ಇದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಎಸಗಿ ಕಾಂಪೌಂಡ್ ಗೋಡೆ ಹಾರಿ ಪರಾರಿಯಾಗಿದ್ದಾನೆ.
ಕೂಡಲೇ ಎಚ್ಚೆತ್ತ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹುಡುಕಾಟದಲ್ಲಿ ನಿರತರಾಗಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್