ಶಾಸಕ ಹಾಲಪ್ಪರಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕಾಮಗಾರಿ ವೀಕ್ಷಣೆ

ರಿಪ್ಪನ್ ಪೇಟೆ : ಸಾಗರ ಹೊಸನಗರ ಕ್ಷೇತ್ರದ ವಿಧಾನಸಭಾ ಸದಸ್ಯ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ  ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.


ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೆರೆಹಳ್ಳಿ  ಹೋಬಳಿಯಲ್ಲಿ ಈಗಾಗಲೇ 200 ಕೋಟಿಗೂ ಅಧಿಕ  ಅಭಿವೃದ್ಧಿ ಕಾಮಗಾರಿಗಳು ನೆರವೇರಿದ್ದು ಈಗಾಗಲೇ  ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದು ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ. ರಿಪ್ಪನ್ ಪೇಟೆ ಯ ಸರಕಾರಿ ಪ್ರಥಮದರ್ಜೆ  ಕಾಲೇಜಿನಿಂದ  ವಿನಾಯಕ ವೃತ್ತದವರೆಗೆ ದ್ವಿಪಥ  ರಸ್ತೆ ನಿರ್ಮಾಣಕ್ಕೆ ಈಗಾಗಲೇ ಸರ್ಕಾರದಿಂದ ಅನುಮೋದನೆ ದೊರೆತಿದ್ದು  ಇನ್ನು ಕೆಲವೇ ದಿನಗಳಲ್ಲಿ  ದ್ವಿಪಥ ರಸ್ತೆಯ ಕಾಮಗಾರಿಗೆ  ಚಾಲನೆಯನ್ನು ನೀಡಲಾಗುವುದು. ಈಗಾಗಲೇ ಸಾಗರ ಹಾಗೂ ಹೊಸನಗರ ತಾಲೂಕುಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು  ಗ್ರಾಮೀಣ ಪ್ರದೇಶದ ಜನರ ಮೂಲಭೂತ ಸೌಕರ್ಯಗಳಾದ ರಸ್ತೆ ಮತ್ತು ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಮುಂದಿನ ಕೆಲವೇ ವರ್ಷಗಳಲ್ಲಿ ವರಾಹಿ ಡ್ಯಾಮಿನಿಂದ ರಿಪ್ಪನ್ ಪೇಟೆ ಪಟ್ಟಣಕ್ಕೆ  ಕುಡಿಯುವ ನೀರಿನ ಸೌಲಭ್ಯವನ್ನು ಏರ್ಪಡಿಸಲಾಗುವುದು.ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಪರಿವರ್ತನೆ ಮಾಡಲು ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ  ಎಂದು ಈ ಸಂದರ್ಭದಲ್ಲಿ ಅವರು ಹೇಳಿದರು.


ಈ ಸಂಧರ್ಭದಲ್ಲಿ ಹುಂಚ – ಕೆರೆಹಳ್ಳಿ ಹೋಬಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ ಮಂಜುನಾಥ್. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ರಾವ್. ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ. ಸದಸ್ಯರಾದ ಸುಧೀಂದ್ರ ಪೂಜಾರಿ. ಡಿ. ಈ.ಮಧುಸೂದನ್.ಆಸೀಫ಼್,ಭೂ ನ್ಯಾಯ  ಮಂಡಳಿ ಸದಸ್ಯರಾದ ಎ .ಟಿ ನಾಗರತ್ನ. ಮೇಣಸೆ ಆನಂದ. ಬಿಜೆಪಿ ಮುಖಂಡರುಗಳಾದ ಸುರೇಶ್ ಸಿಂಗ್. ನವಟೂರು ದೇವೇಂದ್ರಪ್ಪ ಗೌಡ. ಹೂವಪ್ಪ. ಇನ್ನಿತರರಿದ್ದರು.

ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ವೀಕ್ಷಣೆ :


ರಿಪ್ಪನಪೇಟೆ ಗ್ರಾ.ಪಂ ನೂತನ ಕಸ ವಿಲೇವಾರಿ ಘಟಕವನ್ನು ಶಾಸಕ ಹರತಾಳು ಹಾಲಪ್ಪ ಉದ್ಘಾಟಿಸಿದರು.





ರಿಪ್ಪನಪೇಟೆ ಗ್ರಾ.ಪಂ, ಕುಕ್ಕಳಲೆ ರಸ್ತೆಯಿಂದ ನಿಂಗಪ್ಪ ಪುರುಷೋತ್ತಮ ಮನೆಯವರೆಗಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ.ಬರುವೆ ಬಸ್ ನಿಲ್ದಾಣದಿಂದ ಚಿಪ್ಪಿಗನ ಕರೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ.

ರಿಪ್ಪನಪೇಟೆ, ತೀರ್ಥಹಳ್ಳಿ ಮುಖ್ಯರಸ್ತೆಯ ಆನಂದ್ ಮೆಣಸೆ ಮನೆಯಿಂದ ಗವಟೂರು ಗ್ರಾಮದ ಬೆಟ್ಟಿನಕೆರೆ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಪೂಜೆ.ಬರುವೆ ಗ್ರಾಮದ ಚೌಡೇಶ್ವರಿ ಬೀದಿಯ ಕೇಶವ ಮನೆಯ ಎದುರಿನ ಎಸ್.ಸಿ ಗುರುಶಾಂತಪ್ಪನವರ ಮನೆಯವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ.ರಿಪ್ಪನಪೇಟೆ ಮೆಟ್ರಿಕ್ ಪೂರ್ವ ಬಾಲಕರ  ವಿದ್ಯಾರ್ಥಿ ನಿಲಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವೀಕ್ಷಣೆ.ರಿಪ್ಪನಪೇಟೆ, ತಿಲಕ್ ನಗರ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ.

ರಿಪ್ಪನಪೇಟೆ ಸಂತೆ ಮಾರ್ಕೆಟ್ ನಿಂದ ಬಸವೇಶ್ವರ ಶಾಲೆಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ ಪೂಜೆ.ಹಾಗೂ ವಿನಾಯಕ ನಗರ ದೇವದಾಸ್ ಮನೆಯಿಂದ ಸುರೇಶ್ ಶಾರದಮ್ಮ ಮನೆಯವರಿಗೆ ರಸ್ತೆ ಅಭಿವೃದ್ಧಿಗೆ  ಭೂಮಿ ಪೂಜೆ.ಬಾಳೂರು ಗ್ರಾ.ಪಂ, ಪೂಜಾರಿದಿಂಬ ದಿಂದ ಗವಟೂರು ವರೆಗಿನ PMGSY ರಸ್ತೆ ನಿರ್ಮಾಣ ಕಾಮಗಾರಿ ವೀಕ್ಷಣೆ.

ಬಾಳೂರು ಗ್ರಾ.ಪಂ, ಈಚಲಕೊಪ್ಪ ಎಸ್.ಸಿ ಪುಟ್ಟಮ್ಮ ಮನೆಯಿಂದ ಎಸ್.ಸಿ  ದಾನೇಶ್ ಮನೆಯವರೆಗಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ.

ಬಾಳೂರು ಗ್ರಾ.ಪಂ, ಮಾವಿನಸರ ಸಾರ್ವಜನಿಕ ಸಮುದಾಯ ಭವನ ಕಾಮಗಾರಿ ವೀಕ್ಷಣೆ

ಗವಟೂರು ಊರೊಳಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ.ಅರಸಾಳು ಗ್ರಾ.ಪಂ ಬಸವಾಪುರ ಗ್ರಾಮದ ಗುಂಡ್ರುಮೂಲೆ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿದರು.

ಇತ್ತೇಚೆಗೆ ವ್ಯಕ್ತಿಯೊಬ್ಬನನ್ನು ರಕ್ಷಿಸಲು ನೀರಿಗೆ ಹಾರಿ ಮೃತಪಟ್ಟಿದ್ದ ನೆಹರು ಬಡಾವಣೆಯ ನಿವಾಸಿ ದಿ|| ಅನೀದ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿ ಧೈರ್ಯ ತುಂಬಿದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

5 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

6 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago