ಶಿವಮೊಗ್ಗ ನಗರದಲ್ಲಿ ನಿನ್ನೆಯ ದಿನ ಸುರಿದ ಭಾರೀ ಮಳೆ ಸುರಿದಿತ್ತು.ಇಂದು ಆರ್ ಎಂಎಲ್ ನಗರದ ರಾಜಕಾಲುವೆಯಲ್ಲಿ ಒಂದು ನವಜಾತ ಶಿಶುವೊಂದರ ಮೃತದೇಹ ತೇಲಿಬಂದ ಘಟನೆ ನಡೆದಿದೆ.
ಸ್ಥಳೀಯವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದ ಎಸ್ಡಿಪಿಐ ಪಕ್ಷದ ಕಾರ್ಯಕರ್ತರು ಕಸದ ರಾಶಿ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಸುಮಾರು ಒಂದು ತಿಂಗಳ ನವಜಾತ ಶಿಶು ಇದಾಗಿದೆ.
ನೆನ್ನೆಯ ದಿನ ಮಗುವೊಂದು ತೇಲಿ ಹೋಗಿರುವ ಬಗ್ಗೆ ಆರ್ ಎಂಎಲ್ ನಗರದ ಮಹಿಳೆಯೊಬ್ಬರು ಎಸ್ ಡಿಪಿಐ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಆ ಹಿನ್ನಲೆಯಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತರು ಇದನ್ನ ಹುಡುಕಿಕೊಂಡು ಹೋಗಿದ್ದು, ಭರತ್ ಫೌಂಡರಿಯ ರಾಜಾ ಕಾಲುವೆಯಲ್ಲಿ ಮಗುವಿನ ಮೃತದೇಹ ಸಿಲುಕಿಕೊಂಡಿರುವುದು ಕಂಡು ಬಂದಿದೆ.
ಈ ಮಗು ಹೇಗೆ ತೇಲಿ ಬಂತು ಮತ್ತು ಮಗುವಿನ ಸಾವಿಗೆ ಕಾರಣಗಳು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್