ಶಿವಮೊಗ್ಗದ ರಾಜಾಕಾಲುವೆಯಲ್ಲಿ ತೇಲಿ ಬಂತು ನವಜಾತ ಶಿಶುವಿನ ಮೃತದೇಹ :

ಶಿವಮೊಗ್ಗ ನಗರದಲ್ಲಿ ನಿನ್ನೆಯ ದಿನ ಸುರಿದ ಭಾರೀ ಮಳೆ ಸುರಿದಿತ್ತು.ಇಂದು ಆರ್ ಎಂಎಲ್ ನಗರದ ರಾಜಕಾಲುವೆಯಲ್ಲಿ ಒಂದು ನವಜಾತ ಶಿಶುವೊಂದರ ಮೃತದೇಹ ತೇಲಿಬಂದ ಘಟನೆ ನಡೆದಿದೆ.
ಸ್ಥಳೀಯವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದ ಎಸ್​ಡಿಪಿಐ ಪಕ್ಷದ ಕಾರ್ಯಕರ್ತರು ಕಸದ ರಾಶಿ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಸುಮಾರು ಒಂದು ತಿಂಗಳ ನವಜಾತ ಶಿಶು ಇದಾಗಿದೆ.
ನೆನ್ನೆಯ ದಿನ ಮಗುವೊಂದು ತೇಲಿ ಹೋಗಿರುವ ಬಗ್ಗೆ ಆರ್ ಎಂಎಲ್ ನಗರದ ಮಹಿಳೆಯೊಬ್ಬರು ಎಸ್ ಡಿಪಿಐ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಆ ಹಿನ್ನಲೆಯಲ್ಲಿ  ಎಸ್ ಡಿ ಪಿ ಐ ಕಾರ್ಯಕರ್ತರು ಇದನ್ನ ಹುಡುಕಿಕೊಂಡು ಹೋಗಿದ್ದು, ಭರತ್ ಫೌಂಡರಿಯ ರಾಜಾ ಕಾಲುವೆಯಲ್ಲಿ ಮಗುವಿನ ಮೃತದೇಹ ಸಿಲುಕಿಕೊಂಡಿರುವುದು ಕಂಡು ಬಂದಿದೆ.
ಈ ಮಗು ಹೇಗೆ ತೇಲಿ ಬಂತು ಮತ್ತು ಮಗುವಿನ ಸಾವಿಗೆ ಕಾರಣಗಳು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

23 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

23 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago