ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ.
