ಶಿವಮೊಗ್ಗದಲ್ಲಿ ಅಧಿಕ ಮಳೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಿರೀಕ್ಷೆಯಂತೆ ಇಂದು ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ.
ಶಿವಮೊಗ್ಗ ತಾಲ್ಲೂಕಿನಾದ್ಯಂತ ಅತಿಯಾದ ಮಳೆ ಸುರಿಯುತ್ತಿರುವ ಕಾರಣ ತಾಲ್ಲೂಕಿನ ಎಲ್ಲ ಶಾಲೆಗಳಿಗೆ ಅಪರ ಜಿಲ್ಲಾಧಿಕಾರಿಗಳ ಸೂಚನೆಯನ್ವಯ ಈ ದಿನ ಅಂದರೆ ಮೇ.19ರಂದು ರಜೆ ಘೋಷಿಸಿದೆ.
ಹವಮಾನದ ವೈಪರಿತ್ಯ ಹಾಗೂ ಅಧಿಕ ಮಳೆಯ ಹಿನ್ನಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ.ನಗರದ ಮತ್ತು ತಾಲೂಕಿನಲ್ಲಿರುವ ಖಾಸಗಿ, ಅನುದಾನಿತ, ಅನುದಾನ ರಹಿತ ಹಾಗೂ ಸರ್ಕಾರದ ಶಾಲೆಗಳಿಗೆ ಸಧ್ಯಕ್ಕೆ ಒಂದು ದಿನದ ಮಟ್ಟಿಗೆ ಶಾಲೆಗಳು ರಜೆ ಘೋಷಿಸಿವೆ.
ರಾಜ್ಯದಲ್ಲಿ 7 ಜಿಲ್ಲೆಯನ್ನ ರೆಡ್ ಅಲರ್ಟ್ ಘೋಷಿಸಲಾಗಿದ್ದು ಶಿವಮೊಗ್ಗವೂ ಇದರಲ್ಲಿ ಒಂದಾಗಿದೆ. ಹವಮಾನ ಇಲಾಖೆಯ ಪ್ರಕಾರ ಇಂದು ಮಧ್ಯರಾತ್ರಿ 12 ಗಂಟೆಯಿಂದ ಶಿವಮೊಗ್ಗದ ಸುತ್ತಮುತ್ತ ಬೆಳಗಿನ ಜಾವ 3 ಗಂಟೆಯ ವರೆಗೆ ಭಾರಿ ಮಳೆಯಾಗಲಿದ್ದು 10 ಸಿಎಂ ಮಳೆಯಿಂದ 15 ಸೆಂಟಿ ಮೀಟರ್ ಮಳೆಯಾಗಲಿದೆ ಎಂದು ತಿಳಿಸಿದೆ.
ಮುಂದಿನ ಮೂರು ಗಂಟೆಯಲ್ಲಿ ಅಂದರೆ ಇಂದು ಬೆಳಗ್ಗಿನ ಜಾವ 6 ರಿಂದ 9 ಗಂಟೆಯ ವರೆಗೂ 6 ಸೆಂಟಿ ಮೀಟರ್ ಮಳೆಯಾಗುವ ನಿರೀಕ್ಷೆ ಇದೆ. ಬೆಳಿಗ್ಗೆ 10 ರಿಂದ 11 ರವರೆಗೆ 5 ಮಿಲಿಮೀಟರ್ ಮಳೆಯಾಗುವ ನಿರೀಕ್ಷೆ ಇದೆ. ಮಧ್ಯಾಹ್ನ 12 ಗಂಟೆಯ ವರೆಗೆ 5 ಮಿಮಿ ಮಧ್ಯಾಹ್ನ 3 ರಿಂದ 4 ರವರೆಗೆ 10 ಮಿಮಿ ಸಂಜೆಯ 4 ರಿಂದ 5 ರವರೆಗೆ 10 ಮಿಮಿ ಮಳೆಯಾಗಲಿದೆ.
ರಾತ್ರಿ 7 ರಿಂದ 11 ಗಂಟೆಯವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾತ್ರಿ 12 ರ ನಂತರ ಮಳೆಕೊಂಚ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್