ಸಾಗರದಲ್ಲಿ ಡ್ರೈನೇಜ್ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಸಾವು :

ಸಾಗರ : ನಗರಸಭೆಯ ನಿರ್ಲಕ್ಷ್ಯಕ್ಕೆ ಡ್ರೈನೇಜ್ ಚರಂಡಿಗೆ ವ್ಯಕ್ತಿಯೊಬ್ಬ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಸಾಗರ‌ ನಗರದ ಲಿಮ್ರಾ ಟ್ರಾನ್ಸ್ ಪೋರ್ಟ್ ಮಾಲಿಕ ನವಾಬ್ ಜಾನ್(62) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ.


ಬುಧವಾರ ಮದ್ಯಾಹ್ನ ಮಾರ್ಕೆಟ್ ನಿಂದ ಮನೆಗೆ ಹಿಂದಿರುಗುವ ಸಮಯದಲ್ಲಿ ಮೀನು ಮಾರ್ಕೇಟ್ ಬಳಿ ಇರುವ ಚರಂಡಿಗೆ ಬಿದ್ದು
ಅವಘಢ ಸಂಭವಿಸಿದೆ.

ನವಾಬ್ ಜಾನ್ ತಮ್ಮ ದ್ವಿಚಕ್ರ ವಾಹನ ಸಮೇತ ಈ ಚರಂಡಿಗೆ ಬಿದ್ದು,ತಲೆಗೆ ತೀವ್ರತರವಾದ ಗಾಯಮಾಡಿಕೊಂಡಿದ್ದರು.ತಕ್ಷಣ ಇವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ನವಾಬ್ ಜಾನ್ ಮೃತಪಟ್ಟಿದ್ದಾರೆ.

ಈ ತಿರುವಿನ ಚರಂಡಿಯನ್ನು ಮುಚ್ಚದೇ ಹಾಗೇ ಬಿಟ್ಟಿರುವುದರಿಂದ
ಇಲ್ಲಿ ಸಾಕಷ್ಟು ವಾಹನ,ಜನ,ಜಾನುವಾರುಗಳು  ಬಿದ್ದು ಸಮಸ್ಯೆ ಮಾಡಿಕೊಂಡಿದ್ದರು ನಗರಸಭೆ ನಿರ್ಲಕ್ಷ್ಯ ವಹಿಸಿದ್ದರಿಂದ ಇಂದು ಹಿರಿಯ ವ್ಯಕ್ತಿಯೊಬ್ಬರು ಜೀವ ಕಳೆದುಕೊಳ್ಳುವಂತಾಗಿದೆ.

ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…

3 hours ago

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು Renukaswamy murder case takes…

3 hours ago

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…

3 hours ago

ಅಂಗನವಾಡಿ ಸಿಬ್ಬಂದಿಗೆ ಕನಿಷ್ಠ ವೇತನ ಜಾರಿಗೆ ಆಗ್ರಹ: ಜಿಲ್ಲಾಧಿಕಾರಿಗೆ 24 ಬೇಡಿಕೆಗಳ ಮನವಿ

ಅಂಗನವಾಡಿ ಸಿಬ್ಬಂದಿಗೆ ಕನಿಷ್ಠ ವೇತನ ಜಾರಿಗೆ ಆಗ್ರಹ: ಜಿಲ್ಲಾಧಿಕಾರಿಗೆ 24 ಬೇಡಿಕೆಗಳ ಮನವಿ Anganwadi workers in Shivamogga demand…

3 hours ago

ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ Hosanagar BJP stages a massive protest…

7 hours ago