ಸ್ವಯಂ ಪ್ರೇರಿತ ವೇಶ್ಯಾವಾಟಿಕೆ ಕಾನೂನು ಬಾಹಿರವಲ್ಲ – ಸುಪ್ರೀಂಕೋರ್ಟ್


ವೇಶ್ಯಾವಾಟಿಕೆ ಎನ್ನುವುದು ಒಂದು ವೃತ್ತಿಯಾಗಿದೆ. ಲೈಂಗಿಕ ಕಾರ್ಯಕರ್ತೆಯರು ಕಾನೂನಿನ ಅಡಿಯಲ್ಲಿ ಘನತೆ ಹಾಗೂ ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಈ ತೀರ್ಪು ನೀಡಿದ್ದು, ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ರಕ್ಷಿಸಲು  ನಿರ್ದೇಶನಗಳನ್ನು ಕೂಡ ಇದೇ ವೇಳೆ ನೀಡಿದೆ.

ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು  ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ ಈ ಕೆಲಸ ಮಾಡುತ್ತಿದ್ದಾರೆ ಎಂದರೆ, ಪೊಲೀಸರು ಮಧ್ಯಪ್ರವೇಶಿಸ ಬಾರದು.ವೃತ್ತಿಯ ಹೊರತಾಗಿಯೂ, ಸಂವಿಧಾನದ 21 ನೇ ಪರಿಚ್ಛೇದದ ಅಡಿಯಲ್ಲಿ ಈ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಗೌರವಯುತವಾದ ಜೀವನವನ್ನು ಹೊಂದುವ ಹಕ್ಕಿದೆ ಎಂದು ಹೇಳಿದೆ.

ಸ್ವಯಂ ಪ್ರೇರಿತ ವೇಶ್ಯಾವಾಟಿಕೆ ಕಾನೂನು ಬಾಹಿರವಲ್ಲ. ಆದರೆ ವೇಶ್ಯಾಗೃಹಗಳನ್ನು ನಡೆಸುವುದು ಕಾನೂನು ಬಾಹಿರವಾಗಿರುವುದರಿಂದ ವೇಶ್ಯಾಗೃಹಗಳ ಮೇಲೆ ದಾಳಿ ನಡೆಸಿದಂತಹ ಸಂದರ್ಭಗಳಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸುವಂತಿಲ್ಲ. ದಂಡ ವಿಧಿಸುವಂತಿಲ್ಲ, ಕಿರುಕುಳ ನೀಡುವಂತಿಲ್ಲ ಎಂದು ನ್ಯಾಯಪೀಠವು ಹೇಳಿದೆ.

Leave a Reply

Your email address will not be published. Required fields are marked *