ವೇಶ್ಯಾವಾಟಿಕೆ ಎನ್ನುವುದು ಒಂದು ವೃತ್ತಿಯಾಗಿದೆ. ಲೈಂಗಿಕ ಕಾರ್ಯಕರ್ತೆಯರು ಕಾನೂನಿನ ಅಡಿಯಲ್ಲಿ ಘನತೆ ಹಾಗೂ ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಈ ತೀರ್ಪು ನೀಡಿದ್ದು, ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ರಕ್ಷಿಸಲು ನಿರ್ದೇಶನಗಳನ್ನು ಕೂಡ ಇದೇ ವೇಳೆ ನೀಡಿದೆ.
ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ ಈ ಕೆಲಸ ಮಾಡುತ್ತಿದ್ದಾರೆ ಎಂದರೆ, ಪೊಲೀಸರು ಮಧ್ಯಪ್ರವೇಶಿಸ ಬಾರದು.ವೃತ್ತಿಯ ಹೊರತಾಗಿಯೂ, ಸಂವಿಧಾನದ 21 ನೇ ಪರಿಚ್ಛೇದದ ಅಡಿಯಲ್ಲಿ ಈ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಗೌರವಯುತವಾದ ಜೀವನವನ್ನು ಹೊಂದುವ ಹಕ್ಕಿದೆ ಎಂದು ಹೇಳಿದೆ.
ಸ್ವಯಂ ಪ್ರೇರಿತ ವೇಶ್ಯಾವಾಟಿಕೆ ಕಾನೂನು ಬಾಹಿರವಲ್ಲ. ಆದರೆ ವೇಶ್ಯಾಗೃಹಗಳನ್ನು ನಡೆಸುವುದು ಕಾನೂನು ಬಾಹಿರವಾಗಿರುವುದರಿಂದ ವೇಶ್ಯಾಗೃಹಗಳ ಮೇಲೆ ದಾಳಿ ನಡೆಸಿದಂತಹ ಸಂದರ್ಭಗಳಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸುವಂತಿಲ್ಲ. ದಂಡ ವಿಧಿಸುವಂತಿಲ್ಲ, ಕಿರುಕುಳ ನೀಡುವಂತಿಲ್ಲ ಎಂದು ನ್ಯಾಯಪೀಠವು ಹೇಳಿದೆ.
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…