ಹಾಕಿ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಯುವ ಪ್ರತಿಭೆ ಪೂಜಿತಾ

ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ, ಸತತ ಪರಿಶ್ರಮ, ನಿಖರ ಗುರಿ ಇದ್ದಲ್ಲಿ ಎಲ್ಲವೂ ಸಾಧ್ಯವೆಂದು ರಿಪ್ಪನ್ ಪೇಟೆಯ ಬರುವೆ ಗ್ರಾಮದ ಯುವತಿ ಹಾಕಿ ಕ್ಷೇತ್ರದಲ್ಲಿ ಸಾಧಿಸಿ ತೋರಿಸಿದ್ದಾಳೆ.

ರಿಪ್ಪನ್‌ಪೇಟೆ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರ ಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ.

ಕುಮಾರಿ ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ.


ಮಧ್ಯ ಪ್ರದೇಶದ ಭೂಫಾಲ್ ನಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವು ಇಂದು ಹರಿಯಾಣ ತಂಡವನ್ನು ಮಣಿಸಿ ಫೈನಲ್ ಹಂತಕ್ಕೆ ತಲುಪಿದ್ದಾರೆ.ಈ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಕುಮಾರಿ ಪೂಜಿತ ಉತ್ತಮವಾಗಿ ಆಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.ನಾಳೆ ಒಡಿಸ್ಸಾ ತಂಡದ ವಿರುದ್ದ ಫೈನಲ್ ಪಂದ್ಯಾವಳಿ ನಡೆಯಲಿದೆ.


ರಿಪ್ಪನ್ ಪೇಟೆಯ ಬರುವೆ ಗ್ರಾಮದ ಬಡ ಕುಟುಂಬದಲ್ಲಿ ಜನಿಸಿ ಕಷ್ಟ ಸುಖ, ನೋವುಗಳನ್ನು ನೋಡಿ ಕೃಷಿ ಆಧರಿಸಿ ಜೀವನ ಸಾಗಿಸಿಕೊಂಡು ಬಂದಂತಹ  ನಾಗೇಶ್ ಗೌಡ ಪತ್ನಿ ಪೂರ್ಣಿಮಾ ಈ ದಂಪತಿಗಳ ಮಗಳಾದ ಕುಮಾರಿ ಪೂಜಿತ ಇಂದು ರಾಷ್ಟ್ರಮಟ್ಟದಲ್ಲಿ ರಿಪ್ಪನ್ ಪೇಟೆಯ ಕೀರ್ತಿಪತಾಕೆಯನ್ನು  ಕ್ರೀಡಾಲೋಕದಲ್ಲಿ ಹಾರಿಸುತ್ತಿದ್ದಾಳೆ..

ಹೆಚ್ಚು ಅನುಕೂಲಸ್ಥರು ಅಲ್ಲದಿದ್ದರು ತನ್ನ ಮಗಳು ಈ ನಾಡಿಗೆ ಏನಾದರೂ ತನ್ನದೇ ಆದ ಸೇವೆ ಸಲ್ಲಿಸಬೇಕು ಎಂಬ ತಂದೆ-ತಾಯಿಯರ ಕನಸನ್ನು ಇಂದು ಪೂಜಿತ ನನಸಾಗಿಸಿದ್ದಾಳೆ.


ಕುಮಾರಿ ಪೂಜಿತಾ  ತನ್ನ ಬಾಲ್ಯದ ಜೀವನವನ್ನು ರಿಪ್ಪನ್ ಪೇಟೆಯ ಸರಕಾರಿ ಬಾಲಕಿಯರ ಪಾಠಶಾಲೆಯಲ್ಲಿ ವ್ಯಾಸಂಗ ಮಾಡಿ ಮುಂದಿನ ವ್ಯಾಸಂಗಕ್ಕಾಗಿ ಶಿವಮೊಗ್ಗದ ಕ್ರೀಡಾ ಹಾಸ್ಟೆಲ್ ನಲ್ಲಿ  5 ನೇ ತರಗತಿ ಯಿಂದ ಏಳನೇ ತರಗತಿಯವರೆಗೆ ನಂತರ ಎಂಟರಿಂದ 10ನೇ ತರಗತಿ ಕ್ರೀಡಾ ಹಾಸ್ಟೆಲ್ ಮಡಿಕೇರಿಯಲ್ಲಿ ವ್ಯಾಸಂಗ ಮಾಡಿ ಪದವಿಯನ್ನು ಥೆರೆಶಿಯನ್ ಕಾಲೇಜ್ ಮೈಸೂರಿನಲ್ಲಿ ಮುಗಿಸಿದ್ದಾರೆ.

ಈಕೆಯ ದೃಢ ಅಚಲ ಸ್ಪರ್ಧಾ ಮನೋಭಾವ ಹಾಗೂ ಈ ನಾಡಿಗೆ ಕ್ರೀಡಾ ಕ್ಷೇತ್ರದಲ್ಲಿ ಏನಾದರೂ ಸಾಧಿಸಬೇಕು ಎನ್ನುವ ಛಲ ಇಂದು ರಾಷ್ಟ್ರಮಟ್ಟದಲ್ಲಿ ಹಾಕಿ ಕ್ಷೇತ್ರದಲ್ಲಿ ಗುರುತಿಸುವಂತೆ ಮಾಡಿದೆ.

ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಹಲವಾರು ಸಮಸ್ಯೆಗಳ ಮಧ್ಯೆ ಸಾವಿರಾರು ಸ್ಪರ್ಧಾಳುಗಳ ಮಧ್ಯೆ ಸ್ಪರ್ಧಿಸಿ ಗೆದ್ದು ಜಿಲ್ಲಾ, ರಾಜ್ಯ,ಹಾಗೂ ರಾಷ್ಟ್ರಮಟ್ಟದಲ್ಲಿ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡ ಈ ಪ್ರತಿಭೆಗೆ ನಿಜವಾಗಲೂ ಅಭಿನಂದನೆಗಳು.

ಕುಮಾರಿ ಪೂಜಿತಾ ರವರ ಸಾಧನೆಗೆ ಬರುವೆ ಗ್ರಾಮದ ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ ರವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದ ಕಡುಬಡತನದಲ್ಲಿ ಬೆಳೆದು ರಾಷ್ಟ್ರಮಟ್ಟದ ಆಟಗಾರ್ತಿಯಾದ ಪೂಜಿತ ರವರಿಗೆ ಹಾಗೂ ಅವರನ್ನು ಬೆಳೆಸಿ,ಬೆಂಬಲಿಸಿ,ಪ್ರೋತ್ಸಾಹಿಸಿದ ಅವರ ತಂದೆ ತಾಯಿಯವರಿಗೆ ಹಾಗೂ ತರಬೇತುದಾರರಿಗೆ ನಮ್ಮ ಪೋಸ್ಟ್ ಮ್ಯಾನ್ ನ್ಯೂಸ್ ತಂಡದ ವತಿಯಿಂದ ಅಭಿನಂದನೆಗಳು ಹಾಗೂ ಇನ್ನೂ ಹೆಚ್ಚಿನ ಸಾಧನೆ ಮಾಡಲಿ ರಿಪ್ಪನ್ ಪೇಟೆಯ ಕೀರ್ತಿಪತಾಕೆಯನ್ನು ಇನ್ನಷ್ಟು ಬೆಳಗಿಸಲಿ ಎಂಬುದೇ ನಮ್ಮ ಅಶಯ.

ಪೂಜಿತಾಳ ಆಟದ ವೈಖರಿಯ ವೀಡಿಯೋ ಇಲ್ಲಿ ವೀಕ್ಷಿಸಿ👇👇👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

9 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

9 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

10 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

17 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

21 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

21 hours ago