ಹೈಕಮಾಂಡ್ ಬುಲಾವ್ ಹಿನ್ನಲೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಡೀರ್ ದೆಹಲಿಗೆ : ಕೈ ತಪ್ಪುತ್ತಾ ಗೃಹ ಸಚಿವ ಸ್ಥಾನ ??????

ರಾಜ್ಯ ರಾಜಕಾರಣ ದೆಹಲಿ ಅಂಗಳಕ್ಕೆ ಶಿಫ್ಟ್ ಆಗಿದೆ. ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇವತ್ತು ದಿಢೀರ್ ದೆಹಲಿಗೆ ತೆರಳಿದ್ದಾರೆ. ಸಂಜೆ ವೇಳೆಗೆ ಅವರು ದೆಹಲಿಗೆ ವಿಮಾನ  ಹತ್ತಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಸಂಪುಟ ಪುನರ್ ರಚನೆಯ ವೇಳೆ ಗೃಹ ಸಚಿವರ ಕುರ್ಚಿ ಅಲುಗಾಡುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಸಂಪುಟ ಪುನರಚನೆ ಮಾಡಲು ಒಪ್ಪಿಗೆ ಸಿಕ್ಕಿದ್ದೆ  ಆದಲ್ಲಿ ಕೆಲವು ಸಚಿವರ ಸ್ಥಾನಪಲ್ಲಟ ಅಥವಾ ಸಂಪುಟದಿಂದಲೇ ಕೈಬಿಡುವ ಸಾಧ್ಯತೆಗಳಿವೆ. ಸಂಪುಟದ ಸ್ಥಾನಪಲ್ಲಟದ ಲಿಸ್ಟ್‌ನಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರರಿದ್ದಾರೆಯೇ..? ಎಂಬ ಪ್ರಶ್ನೆ ಮೂಡಿದೆ. ಕಾರಣ ಬೊಮ್ಮಾಯಿ ಬೆನ್ನಲೇ ಜ್ಞಾನೇಂದ್ರ ಸಹ ದೆಹಲಿಗೆ ಹೋಗಿದ್ದಾರೆ.
ವಯಸ್ಸಿನ ಕಾರಣದಿಂದಾಗಿ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪನವರನ್ನು ಆ ಸ್ಥಾನದಿಂದ ಬಿಜೆಪಿ ಹೈ ಕಮಾಂಡ್ ಇಳಿಸಿದರು. ಈ ವೇಳೆ ಬಸವರಾಜ ಬೊಮ್ಮಾಯಿಯವರು ಯಡಿಯೂರಪ್ಪರ ಕೃಪೆಯಿಂದ ಮುಖ್ಯಮಂತ್ರಿಯ ಗಾದಿಯನ್ನು ಏರಿದರು. ಮುಖ್ಯಮಂತ್ರಿಯವರು ತನ್ನ ಸಚಿವರನ್ನು ಆಯ್ಕೆ ಮಾಡುವ ಬೆರಳೆಣಿಕೆಯ ಸಚಿವರನ್ನು ಹೊರತುಪಡಿಸಿ ಬಹುತೇಕ ಯಡಿಯೂರಪ್ಪರ ಸಂಪುಟವನ್ನೇ ಮುಂದುವರೆಸಿದರು. ಈ ವೇಳೆ ಆರ್‌ಎಸ್‌ಎಸ್ ನ ಜೊತೆ ಒಡನಾಟವನ್ನು ಹೊಂದಿದ್ದ ಆರಗ ಜ್ಞಾನೇಂದ್ರರವರಿಗೆ ಖಡಕ್ ಖಾತೆಯಾದ ಗೃಹಮಂತ್ರಿಯಾಗುವ ಅವಕಾಶ ಒಲಿದು ಬಂತು.
ಸದಾ ಹಸನ್ಮುಖಿಯಾಗಿರುವ ಗೃಹಸಚಿವರು ಇಲಾಖೆಯ ಬಗ್ಗೆ ಮಾಹಿತಿಯನ್ನು ತಿಳಿದು ಹಿಡಿತ ಸಾಧಿಸಲು ಹಲವಾರು ತಿಂಗಳುಗಳೇ ಬೇಕಾಯ್ತು. ಇದರ ನಡುವೆ ಗೃಹ ಸಚಿವರ ಹೇಳಿಕೆಗಳು ಮತ್ತು ಆಡಳಿತವೈಕರಿ ವಿಪಕ್ಷಗಳ ಟೀಕೆಗೆ ಮತ್ತು ಆಡಳಿತ ವೈಫಲ್ಯದಿಂದಾಗಿ ಗೃಹ ಸಚಿವರ ಸ್ಥಾನಪಲ್ಲಟದ ಬಗ್ಗೆ ರಾಜಕೀಯ ಪಡಸಾಲೆಯಲ್ಲಿ ಗುಸು ಗುಸು ಪ್ರಾರಂಭವಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

8 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

8 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

8 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

15 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

19 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

19 hours ago