ಹೊಸನಗರ ತಾಲೂಕ್ ಜೆಡಿಎಸ್ ಅಧ್ಯಕ್ಷರಾಗಿ ಎನ್ ವರ್ತೇಶ್ ನೇಮಕ :

ಹೊಸನಗರ : ಜೆಡಿಎಸ್ ಪಕ್ಷದ ಹೊಸನಗರ ತಾಲೂಕು ಅಧ್ಯಕ್ಷರನ್ನಾಗಿ ರಿಪ್ಪನ್‌ಪೇಟೆಯ ಎನ್ ವರ್ತೇಶ್ ರವರನ್ನು ಇಂದಿನಿಂದಲೇ ಜಾರಿಗೆ ಬರುವಂತೆ  ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ನೇಮಕ ಮಾಡಿದ್ದಾರೆ.

ರಿಪ್ಪನ್‌ಪೇಟೆಯ  ಎನ್ ವರ್ತೇಶ್ ಜೆಡಿಎಸ್ ನ ಹಿರಿಯ ಮುಖಂಡರಾಗಿದ್ದು ಹಲವಾರು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ. ಜಿಲ್ಲಾ ಸಮಿತಿಯವರು ಸಂಘಟನಾ ಚತುರ ಎನ್ ವರ್ತೇಶ್ ರವರನ್ನು ತಾಲೂಕ್ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ತಾಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಮೂಡಿದೆ.

ಎನ್ ವರ್ತೇಶ್ ರವರನ್ನು ಹೊಸನಗರ ತಾಲೂಕ್ ಜೆಡಿಎಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಹೆಚ್ ಡಿ ಕುಮಾರಸ್ವಾಮಿ ಹಾಗೂ ಜಿಲ್ಲಾಧ್ಯಕ್ಷರಾದ ಎಂ ಶ್ರೀಕಾಂತ್,ಕಾರ್ಯಾಧ್ಯಕ್ಷರಾದ ರಾಮಕೃಷ್ಣ ರವರಿಗೆ ರಾಜ್ಯ ಜೆಡಿಎಸ್ ಮುಖಂಡ ಅರ್ ಎ ಚಾಬುಸಾಬ್,ಮುಖಂಡರಾದ ಜಿ ಎಸ್ ವರದರಾಜ್,ಆರ್ ಎನ್ ಮಂಜುನಾಥ್,ಕಲ್ಲೂರು ಈರಣ್ಣ ರವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

55 minutes ago

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…

1 hour ago

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

18 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

21 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

22 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

2 days ago