ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವರ್ಗಾವಣೆ : ನೂತನ ಪಿಎಸ್ ಐ ನೀಲರಾಜ್ ಬಿ ಅಧಿಕಾರ ಸ್ವೀಕಾರ

ಹೊಸನಗರ: ಪಟ್ಟಣದ ಖಡಕ್ ಪಿಎಸ್ ಐ ಎಂದೇ ಹೆಸರುವಾಸಿಯಾಗಿದ್ದ ರಾಜೇಂದ್ರನಾಯ್ಕ್ ರವರು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.

ರಾಜೇಂದ್ರನಾಯ್ಕ್ ರವರ ಸ್ಥಾನಕ್ಕೆ  ದಾವಣಗೆರೆ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೀಲರಾಜ್ ಬಿ. ನರಲಾರ ರವರು ಹೊಸನಗರ ಪಿಎಸ್ ಐ ಆಗಿ ನೇಮಕವಾಗಿದ್ದಾರೆ.
ಹೊಸನಗರದ ಖಡಕ್ ಪಿಎಸ್ ಐ ವಿರುದ್ದ ಮರಳು ಮಾಫ಼ಿಯಾ ಹಾಗೂ ಗಣಿ ಮಾಫ಼ಿಯಾ ದವರು ಇತ್ತೀಚೆಗೆ ಅನೇಕ ಷಡ್ಯಂತ್ರಗಳನ್ನು ರೂಪಿಸಿ ಅವರ ತೇಜೋವಧೆಗೆ ಪ್ರಯತ್ನಿಸಿದಾಗ ಹೊಸನಗರ ಪಟ್ಟಣದ ನಾಗರೀಕರು ಒಕ್ಕೊರಲಿನಿಂದ ಪ್ರಾಮಾಣಿಕ ಹಾಗೂ ಖಡಕ್ ಪಿಎಸ್ ಐ ರಾಜೇಂದ್ರನಾಯ್ಕ್ ರವರ ಪರವಾಗಿ ನಿಂತು ಪ್ರತಿಭಟನೆಯನ್ನು ಸಹ ಮಾಡಿದ್ದರು.

ಮೂಲಗಳ ಪ್ರಕಾರ ಮಕ್ಕಳ ವಿದ್ಯಾಬ್ಯಾಸಕ್ಕಾಗಿ ರಾಜೇಂದ್ರನಾಯ್ಕ್ ರವರೇ ವೈಯಕ್ತಿಕವಾಗಿ ವರ್ಗಾವಣೆ ಕೇಳಿ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಒಟ್ಟಾರೆ ಹೊಸನಗರದಂತಹ ಪಟ್ಟಣದಲ್ಲಿ ತನ್ನ ಖಡಕ್ ನಿಲುವಿನಿಂದ ಕಳ್ಳ ಕಾಕರಿಗೆ,ಮರಳು ಮಾಫ಼ಿಯಾ ದೊರೆಗಳಿಗೆ ಸಿಂಹ ಸ್ವಪ್ನವಾಗಿದ್ದ ರಾಜೇಂದ್ರನಾಯ್ಕ್ ನಾಯ್ಕ್ ವರ್ಗಾವಣೆ ಹೊಸನಗರ ನಾಗರೀಕರಿಗೆ ಬೇಸರ ತರಿಸಿದೆ.

ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಪಿಎಸ್ ಐ ಅಧಿಕಾರ ಸ್ವೀಕಾರ


ಸರ್ಕಲ್ ಇನ್ಸ್‌ಪೆಕ್ಟರ್‌ರಾಗಿ ಗಿರೀಶ್ ಬಿ.ಸಿ ಹಾಗೂ ಸಬ್‌ಇನ್ಸ್‌ಪೆಕ್ಟರ್‌ರಾಗಿ ನೀರರಾಜ್ ಬಿ. ನರಲಾರ ರವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ಸರ್ಕಲ್ ಇನ್ಸ್‌ಪೆಕ್ಟರ್‌ರಾಗಿ ಸೇವೆ ಸಲ್ಲಿಸುತ್ತಿದ್ದ ಮಧುಸೂದನ್‌ರವರು ಬೆಂಗಳೂರಿಗೆ ಹಾಗೂ ಸಬ್‌ಇನ್ಸ್‌ಪೆಕ್ಟರ್‌ರಾಗಿ ಸೇವೆ ಸಲ್ಲಿಸುತ್ತಿದ್ದ ರಾಜೇಂದ್ರನಾಯ್ಕ್ ರವರು ಉಡುಪಿಯ ಬ್ರಹ್ಮಾವರಕ್ಕೆ ವರ್ಗಾವಣೆ ಆಗಿರುವ ಹಿನ್ನಲೆಯಲ್ಲಿ ಅವರ ಸ್ಥಾನಕ್ಕೆ ಸಾಗರದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಿ ಸಿ ಗಿರೀಶ್‌ ರವರು ಹಾಗೂ ದಾವಣಗೆರೆ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೀಲರಾಜ್ ಬಿ. ನರಲಾರರವರು ಹೊಸನಗರ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

8 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

8 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

12 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

14 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

15 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago