ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು ಪೂಜಿತ ಗೌಡ ರವರಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮತ್ತು ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸನ್ಮಾನ :
ರಿಪ್ಪನ್‌ಪೇಟೆ : ರಾಷ್ಟ್ರ ಮಟ್ಟದ ಹಾಕಿ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ತೋರಿ ಮಿಂಚುತ್ತಿರುವ ಪಟ್ಟಣದ ಬರುವೆ ಗ್ರಾಮದ ಅಪ್ರತಿಮ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇಂದು ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಹಲವಾರು ಸಮಸ್ಯೆಗಳ ಮಧ್ಯೆ ಸಾವಿರಾರು ಸ್ಪರ್ಧಾಳುಗಳ ಮಧ್ಯೆ ಸ್ಪರ್ಧಿಸಿ ಗೆದ್ದು ಜಿಲ್ಲಾ, ರಾಜ್ಯ,ಹಾಗೂ ರಾಷ್ಟ್ರಮಟ್ಟದಲ್ಲಿ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡ ನಮ್ಮೂರಿನ ಹೆಮ್ಮೆಯ…