ಪಾದಾಚಾರಿಗಳ ಮೇಲೆ ಕಾರು ಹರಿದು ಹೋಗಿ ರಿಪ್ಪನ್‌ಪೇಟೆ ಮೂಲದ ವ್ಯಕ್ತಿಯೊಬ್ಬ ದುರ್ಮರಣ ಹೊಂದಿದ ಘಟನೆ ಬೆಂಗಳೂರು ನಗರದ ಕತ್ರಿಗುಪ್ಪೆಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದು ಹೋಗಿದ್ದಲ್ಲದೆ, ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮದ ಸುರೇಶ್ ಯಾನೆ ರುದ್ರಪ್ಪ (28) ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿನ್, ಸಿವರಾಜು, ಶೈಲೇಂದ್ರ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.
ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮದ ರಾಮಣ್ಣ ರವರ ಪುತ್ರ ಸುರೇಶ್ ಯಾನೆ ರುದ್ರಪ್ಪ (28) ಎಂಬ ಯುವಕ ಮೃತಪಟ್ಟ ದುರ್ಧೈವಿಯಾಗಿದ್ದಾನೆ.
ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮದ ರಾಮಣ್ಣ ರವರ ಪುತ್ರ ಸುರೇಶ್ ಯಾನೆ ರುದ್ರಪ್ಪ (28) ಎಂಬ ಯುವಕ ಮೃತಪಟ್ಟ ದುರ್ಧೈವಿಯಾಗಿದ್ದಾನೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ಉದ್ಭವ್ ಆಸ್ಪತ್ರೆಯ ಎದುರು ಈ ದುರ್ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಬನಶಂಕರಿ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಘಟನೆ ಸಂಬಂಧ ಕಾರು ಸಹಿತ ಕಾರು ಚಾಲಕ ಮುಖೇಶ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಿಗ್ಗೆ 7.20ಗಂಟೆ ಸಮಯದಲ್ಲಿ ನಂಬರ್ KA-51-MK5416 ನಂಬರ್ನ ಕಾರನ್ನು ಕತ್ತರಗುಪ್ಪೆ ಜಂಕ್ಷನ್ ಕಡೆಯಿಂದ ಇಟ್ಟಮಡು ಜಂಕ್ಷನ್ ಕಡೆ ವೇಗವಾಗಿ ಮತ್ತು ನಿರ್ಲಕ್ಷತೆಯಿಂದ ಚಲಾಯಿಸಿಕೊಂಡು ಬರಲಾಗಿದೆ. ಉದ್ಭವ ಆಸ್ಪತ್ರೆ ಬಳಿ ಇರುವ ಚಂದನ್ ಮೋಟಾರ್ ದ್ವಿಚಕ್ರ ವಾಹನ ಶೋರೂಂ ಬಳಿ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದುಹೋಗಿದೆ. ಘಟನೆಯಲ್ಲಿ ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳು ಜಖಂಗೊಂಡಿದೆ.
ಘಟನೆ ಸಂಬಂಧ ಮಾಹಿತಿ ನೀಡಿದ ಪಶ್ಚಿಮ ಸಂಚಾರಿ ವಿಭಾಗದ ಡಿಸಿಪಿ ಕುಲದೀಪ್ ಜೈನ್, ಬೆಳಗ್ಗೆ ನಾಲ್ವರು ಪಾದಚಾರಿಗಳಿಗೆ ಕತ್ರಿಗುಪ್ಪೆ ಜಂಕ್ಷನ್ ಬಳಿ ಕಾರು ಡಿಕ್ಕಿ ಹೊಡೆದಿದೆ. ಸುರೇಶ್ ಎಂಬಾತ ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ. ಅಲ್ಲದೆ ಒಂದು ಬೈಕ್, ಕಾರಿಗೂ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಮುಖೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆಯಲಾಗಿದೆ. ಕಿರುತೆರೆಯ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುತ್ತಿರುವ ಮುಖೇಶ್, ನಿರ್ಲಕ್ಷ್ಯದಿಂದ ಹಾಗೂ ವೇಗವಾಗಿ ಚಾಲನೆ ನಡೆಸಿರುವುದು ಅಪಘಾತಕ್ಕೆ ಕಾರಣ ಎಂದು ಹೇಳಿದರು.

ಅಪಘಾತದ ಸಿಸಿಟಿವಿ ವೀಡಿಯೋ ಇಲ್ಲಿ ವೀಕ್ಷಿಸಿ👇