ಶಿವಮೊಗ್ಗದ ಸೂಳೆಬೈಲು ಸಮೀಪದ ಇಂದಿರಾ ನಗರದಲ್ಲಿ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಕಾರಿನ ಗಾಜು ಪುಡಿಯಾಗಿದೆ. ಇದರಿಂದ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಘಟನೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಜನ ಗುಂಪುಗೂಡಿದರು. ಹಾಗಾಗಿ ಸೂಳೆಬೈಲಿನಲ್ಲಿ ಗೊಂದಲ ಸೃಷ್ಟಿಯಾಯಿತು. ಕೂಡಲೆ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ.
ಕಾರು ಶಿವಮೊಗ್ಗದಿಂದ ಮತ್ತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಹಿಂಬದಿಯಿಂದ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರು ಮತ್ತೂರಿನಲ್ಲಿರುವ ತಮ್ಮ ಸಂಬಂಧಿಯ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸೂಳೆಬೈಲು ಇಂದಿರಾ ನಗರದ ಬಳಿಕ ಇಬ್ಬರು ಅಥವಾ ಮೂವರು ದುಷ್ಕರ್ಮಿಗಳು ಕಾರಿನ ಹಿಂಬದಿಗೆ ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಹಿಂಬದಿ ಗಾಜು ಪುಡಿಯಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸೂಳೆಬೈಲಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಹಿಂದೂ ಸಂಘಟನೆ ಪ್ರಮುಖರು, ಕಾರ್ಯಕರ್ತರು ಸೂಳೆಬೈಲಿನಲ್ಲಿ ಜಮಾಯಿಸಿದರು.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಅಂಗಡಿ ಮುಂಗಟ್ಟು ಬಂದ್ ಮಾಡಿಸಿದರು. ಗುಂಪು ಸೇರದಂತೆ ನಿಯಂತ್ರಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್ ಭೇಟಿ ನೀಡಿದ್ದಾರೆ.ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.