w
Headlines
Home » ಸಾಹಿತ್ಯಕ ಚಟುವಟಿಕೆಗಳು ನಿರಂತರವಾಗಿ ನಡೆಯುವಂತಾಗಲಿ : ಶಾಸಕ ಹರತಾಳು ಹಾಲಪ್ಪ

ಸಾಹಿತ್ಯಕ ಚಟುವಟಿಕೆಗಳು ನಿರಂತರವಾಗಿ ನಡೆಯುವಂತಾಗಲಿ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಕನ್ನಡದ ಭಾಷೆ ಮತ್ತು ಸಾಹಿತ್ಯಕ ಚಟುವಟಿಕೆಗಳನ್ನು ನಡೆಸಲು ಕನ್ನಡದ ಮನಸ್ಸುಗಳನ್ನು ಜೋಡಿಸಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ತ.ಮ.ನರಸಿಂಹರವರು ಪ್ರಯತ್ನಿಸಿ ಕಾರ್ಯಚಟುವಟಿಕೆ ನಡೆಸಲಿ ಎಂದು ಮಾಜಿ ಸಚಿವ ಹಾಗೂ ಸಾಗರ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳುರವರು ಹೇಳಿದರು. 


ಅವರು ಇಂದು ರಿಪ್ಪನ್ ಪೇಟೆಯಲ್ಲಿ ಹೊಸನಗರ ತಾಲೂಕು  ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ತ.ಮ.ನರಸಿಂಹರವರನ್ನು ಅವರ ಮನೆಯಂಗಳದಲ್ಲಿ ಸನ್ಮಾನಿಸಿ, ಗೌರವಿಸಿದರು. ಕನ್ನಡದ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು ಕನ್ನಡದ ಭಾಷೆ ಮತ್ತು ಸಾಹಿತ್ಯದ ಕಾರ್ಯಕ್ರಮಗಳಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.

 ಈ ಕಾರ್ಯಕ್ರಮದಲ್ಲಿ ಶ್ರೀಮತಿ ಆಶಾ ನರಸಿಂಹ,  ಟಿ ಆರ್ ಕೃಷ್ಣಪ್ಪ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂಬಿ ಮಂಜುನಾಥ್ ಮುಖಂಡರಾದ ಮೆಣಸೆಆನಂದ, ಕೆಬಿ ಹೂವಪ್ಪ, ಶ್ರೀಮತಿ ಎಟಿ ನಾಗರತ್ನಮ್ಮ,ಕೀರ್ತಿರಾಜ್ ಗೌಡ ಮುಂತಾದವರು ಉಪಸ್ಥಿತರಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇


Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.