ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ತಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ.
ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ( KA15 N 6258) ಮಾರುತಿ ಎರ್ಟಿಗಾ ಕಾರು ಹಾಗೂ ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತಿದ್ದ (KA 02 AE 9621)ಇನ್ನೊವಾ ಕಾರುಗಳ ನಡುವೆ ವಿನಾಯಕ ವೃತ್ತದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.ಆಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ.
ಎರಡು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಅದೃಷ್ಟವಶಾತ್ ಯಾರಿಗೂ ಯವುದೇ ಗಂಭೀರ ಗಾಯಗಳಾಗಿರುವುದಿಲ್ಲ.ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇