Headlines

ರಿಪ್ಪನ್‌ಪೇಟೆ ಆರೋಗ್ಯ ಕೇಂದ್ರದಲ್ಲಿ 108 ಆಂಬುಲೆನ್ಸ್ ಸೌಲಭ್ಯವಿಲ್ಲದೆ ನರಳಾಡಿದ ಅಪಘಾತಗೊಂಡ ಗಾಯಾಳುಗಳು :

ಹೊಸನಗರ ತಾಲೂಕಿನ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆಯನ್ನು ಹೊಂದಿರುವ  ರಿಪ್ಪನ್ ಪೇಟೆ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ  108 ಆಂಬುಲೆನ್ಸ್ ಸೌಲಭ್ಯವಿಲ್ಲದೆ  ಕಳೆದ ಮೂರು ತಿಂಗಳುಗಳಾಗಿವೆ.  ಈ ಬಗ್ಗೆ ಸ್ಥಳೀಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಸಂಬಂಧ  ಪಟ್ಟ ಹಿರಿಯ ಅಧಿಕಾರಿಗಳಿಗೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಹಲವಾರು ಬಾರಿ ಸಾರ್ವಜನಿಕರು ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಸ್ಪಂದನೆಯನ್ನು ನೀಡಿರಲಿಲ್ಲ.


ರಸ್ತೆ ಅಪಘಾತದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿಯಿಂದ ತಂದೆ ಸ್ಥಳದಲ್ಲೇ ಮೃತಪಟ್ಟರೆ ಬದುಕುಳಿದ ಮಗನಿಗೆ ತಲೆಗೆ  ತೀವ್ರತರವಾದ ಪೆಟ್ಟಾಗಿದ್ದು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ತಕ್ಷಣ ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲು ಸೂಚಿಸಿದರು.


ಆದರೆ ಕಳೆದ ಮೂರು ತಿಂಗಳುಗಳಿಂದ ಈ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇಲ್ಲದ ಕಾರಣ ಎರಡು ಗಂಟೆಗೂ ಹೆಚ್ಚುಕಾಲ ತೀವ್ರ ಗಾಯಗೊಂಡಿದ್ದ ವ್ಯಕ್ತಿಯ ನರಳಾಟ ಹೃದಯ ವಿದ್ರಾವಕವಾಗಿತ್ತು.

ಒಂದೆಡೆ ತನ್ನ ತಂದೆ ಮೃತಪಟ್ಟು ಪಕ್ಕದ ಶವಗಾರದಲ್ಲಿ ಮಲಗಿದ್ದರೆ,ಇನ್ನೊಂದೆಡೆ ಮಗನು ಆಂಬುಲೆನ್ಸ್ ಇಲ್ಲದೇ ಜೀವ ಕೈಯಲ್ಲಿ ಹಿಡಿದು ನರಳಾಡುತಿದ್ದ ದೃಶ್ಯ ಮನ ಕಲಕುವಂತಿತ್ತು.

ಇದೇ ಸಂಧರ್ಭದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ  ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳಿಸುವ ಸಲುವಾಗಿ 108 ಅಂಬುಲೆನ್ಸ್ ಸೇವೆಗಾಗಿ ಜನಜಾಗೃತಿ ವೇದಿಕೆಯ ಅಧ್ಯಕ್ಷ  ಟಿ.ಆರ್ ಕೃಷ್ಣಪ್ಪ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಿಗೆ ಹತ್ತಾರು ಬಾರಿ ಮೊಬೈಲ್ ಮೂಲಕ ಕರೆ ಮಾಡಿದರು ಸಹ ಯಾರು ಸ್ಪಂದಿಸಲಿಲ್ಲ.

ಘಟನೆ ನಡೆದ ಎರಡು ಗಂಟೆಗೂ ಹೆಚ್ಚಿನ ಸಮಯದ ನಂತರ 108 ಅಂಬುಲೆನ್ಸ್  ಸೇವೆ ದೊರೆಯಿತು.

ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು  ರಿಪ್ಪನ್ ಪೇಟೆ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಸೇವೆಯನ್ನು ಒದಗಿಸಲು ಮುಂದಾಗಬೇಕೆಂದು ಜಿಪಂ ಮಾಜಿ ಸದಸ್ಯರಾದ ಬಂಡಿ ರಾಮಚಂದ್ರ,ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ್ ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಘಟನೆಯ ಹಿನ್ನಲೆ :

ಗವಟೂರು ಶಾಲೆಯ ಬಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಬೈಕುಗಳ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಹೊಂಬುಜ ಸಮೀಪದ ಹೊನ್ನೇ ಬೈಲು ಗ್ರಾಮದ ಕಿಳೇರಿ ನಿವಾಸಿ ಗಣೇಶ್ ಅಲಿಯಾಸ್ ಗುಂಡಣ್ಣ(65  ) ಮೃತರಾಗಿದ್ದಾರೆ. ಜೊತೆಗಿದ್ದ ಇವರ ಮಗ ಮಹೇಂದ್ರ (  26) ತೀವ್ರ ಸ್ವರೂಪದ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಎದುರುಗಡೆಯಿಂದ ಬರುತ್ತಿದ್ದ ಖಾಸಗಿ ಶಾಲಾ ನೌಕರ ರಾಜು ಆಚಾಪುರ ಎಂಬಾತನಿಗೆ ತೀವ್ರತರವಾದ ಗಾಯಗಳಾಗಿದ್ದು ರಿಪ್ಪನ್ ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅಪಘಾತ ಪ್ರಕರಣ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮನಕಲಕುವ ವೀಡಿಯೋ ಇಲ್ಲಿ ವೀಕ್ಷಿಸಿ👇


Leave a Reply

Your email address will not be published. Required fields are marked *

Exit mobile version