ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ.
2019 ರ ಫೆ.10 ರಂದು ಬೆಳಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿಯಾದ ಲಿಂಗರಾಜ @ ನವೀನ (18) ಈತನು 06 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯು ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ, ಚಾಕಲೇಟ್ ಕೊಡುತ್ತೇನೆಂದು ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.
ಆಗಿನ ತನಿಖಾಧಿಕಾರಿಗಳಾದ ಯೋಗೇಶ್, ಸಿಪಿಐ ಭದ್ರಾವತಿ ಗ್ರಾಮಾಂತರ ವೃತ್ತ ರವರು ಈ ಪ್ರಕರಣದ ತನಿಖೆಯನ್ನು ಕೈಗೊಂಡು ಆರೋಪಿ ಲಿಂಗರಾಜ @ ನವೀನ (18) ಈತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, Addl District and Sessions Judge, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಾಧೀಶರಾದ ಮೋಹನ ಜೆ.ಎಸ್ ರವರು ಇಂದು ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000 ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳ ಕಾಲ ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್