Headlines

ಅಮೃತ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ಅವಿರೋಧವಾಗಿ ಆಯ್ಕೆ

ರಿಪ್ಪನ್‌ಪೇಟೆ: ಅಮೃತ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಮಂಜುಳಾ ರಾಜು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಮಂಜುಳಾ ರಾಘವೇಂದ್ರ ಆಚಾರ್ ಆಯ್ಕೆಯಾಗಿದ್ದಾರೆ.


11 ಜನ ಸದಸ್ಯರಿರುವ ಗ್ರಾಮ ಪಂಚಾಯತಿ 2 ಕಾಂಗ್ರೆಸ್ ಸದಸ್ಯರಿದ್ದು 9 ಸ್ಥಾನ ಬಿಜೆಪಿ ಪಾಲಾಗಿತ್ತು. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರ ನೇತೃತ್ವದಲ್ಲಿ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.


ರಿಪ್ಪನ್‌ಪೇಟೆ- ಹುಂಚಾ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ.ಬಿ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ನಾಗಾರ್ಜುನಸ್ವಾಮಿ,ಎನ್ ಸತೀಶ್ ಗ್ರಾಪಂ ಸದಸ್ಯರಾದ ಸಚಿನ್ ಗೌಡ ಸೇರಿದಂತೆ ಬಿಜೆಪಿ ಮುಖಂಡರು, ಗ್ರಾಪಂ ಸದಸ್ಯರು ಹಾಗೂ ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *