ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಸಿದ್ಧತೆ :

ರಿಪ್ಪನ್ ಪೇಟೆ : ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳಿಂದ ಸಂಘಟನೆಗಳ ಸಹಕಾರದಿಂದ  ಅರಸಾಳು ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿರುವುದಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ. ಪಿ ರಾಮಚಂದ್ರ ಹೇಳಿದರು.


ರಿಪ್ಪನ್ ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಅರಸಾಳು ರೈಲ್ವೆ ನಿಲ್ದಾಣವನ್ನು ಉನ್ನತೀಕರಿಸಿ ಶಿವಮೊಗ್ಗದಿಂದ ತಾಳಗುಪ್ಪ ಮಾರ್ಗದಲ್ಲಿ ಪ್ರತಿನಿತ್ಯ ಓಡಾಡುವ ಎಲ್ಲಾ ರೈಲುಗಳನ್ನು ಅರಸಾಳು ರೈಲು ನಿಲ್ದಾಣದಲ್ಲಿ ನಿಲುಗಡೆ ಗೊಳ್ಳಲಿ ಎಂದು  ಹೊಸನಗರ ತಾಲೂಕಿನ ಎಲ್ಲಾ ನಾಗರಿಕರು ಲೋಕಸಭಾ ಸದಸ್ಯರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರರವರ ಇಚ್ಛಾಶಕ್ತಿಯಿಂದ ಅರಸಾಳು ಗ್ರಾಮದಲ್ಲಿ ರೈಲ್ವೆ ನಿಲ್ದಾಣವನ್ನು  ನೂತನವಾಗಿ ಪುನರ್ ನಿರ್ಮಾಣ ಮಾಡಿ.  ಮಾಲ್ಗುಡಿ ಮ್ಯೂಸಿಯಂ ಸ್ಥಾಪಿಸಿ ಅರಸಾಳು ರೈಲ್ವೆ ನಿಲ್ದಾಣವನ್ನು ಪ್ರವಾಸಿ ಕೇಂದ್ರವನ್ನಾಗಿ  ನಿರ್ಮಾಣ ಮಾಡಿದ್ದಾರೆ.


ಮಾಲ್ಗುಡಿ ಮ್ಯೂಸಿಯಂ ನೋಡಲು ಪ್ರತಿನಿತ್ಯ  ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಜನರು ಬರುತ್ತಾರೆ. ಅರಸಾಳು ರೈಲ್ವೆ ನಿಲ್ದಾಣದ ಮೂಲಕ ಪ್ರತಿ ದಿನ ಬೆಂಗಳೂರು ಮೈಸೂರು ನಗರಗಳು ಸೇರಿದಂತೆ  ಸೇರಿದಂತೆ ವಿವಿಧೆಡೆಗೆ ನಾಲ್ಕಕ್ಕೂ ಅಧಿಕ ರೈಲುಗಳು ಸಂಚರಿಸುತ್ತಿವೆ ಆದರೆ ಇಲ್ಲಿ ಅಧಿಕಾರಿಗಳ  ಮತ್ತು ಚುನಾಯಿತ  ಪ್ರತಿನಿಧಿಗಳ  ನಿರ್ಲಕ್ಷದಿಂದ ಯಾವುದೇ ರೈಲುನಿಲುಗಡೆ ಆಗುತ್ತಿಲ್ಲ.


ಹೊಸನಗರ ತಾಲೂಕಿನಲ್ಲಿರುವ ಏಕೈಕ ರೈಲು ನಿಲ್ದಾಣ ವಾಗಿರುವ  87 ವರ್ಷಗಳ ಇತಿಹಾಸವಿರುವ ಈ ರೈಲ್ವೆ ನಿಲ್ದಾಣದಲ್ಲಿ ಈಗಾಗಲೇ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ  ಎಲ್ಲಾ ರೀತಿಯ ರೈಲುಗಳು ನಿಲುಗಡೆ ಗೊಳ್ಳುವಂತೆ ಪ್ಲಾಟ್ ಫಾರಂ  ಸಹ ನಿರ್ಮಾಣ ಮಾಡಲಾಗಿದೆ. ಆದರೆ ಯಾವುದೇ ರೈಲುಗಳು ನಿಲುಗಡೆಯಾಗುತಿಲ್ಲ.

ಈ ಬಗ್ಗೆ ಅನೇಕ ಬಾರಿ ಹೊಸನಗರ ತಾಲೂಕಿನ ಜನತೆ ಸಂಸದ ಬಿವೈ ರಾಘವೇಂದ್ರ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಹಾಲಪ್ಪ ಹಾಗೂ ರಾಜ್ಯ ಗೃಹಮಂತ್ರಿ ಆರಗ ಜ್ಞಾನೇಂದ್ರ ರವರಿಗೆ ಹಲವಾರು ಬಾರಿ ಮನವಿ ನೀಡಿದರೂ ಸಹ ಯಾರು ರೈಲ್ವೆ ನಿಲುಗಡೆ ಬಗ್ಗೆ ಗಮನಹರಿಸುತ್ತಿಲ್ಲ.

ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಗೊಂಡರೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸುವ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಶ್ರೀರಾಮಚಂದ್ರಾಪುರಮಠ,ಕವಲೇದುರ್ಗದ ಭಕ್ತಾದಿಗಳಿಗೆ,ಪ್ರವಾಸಿಗರ ರಮಣೀಯ ಪ್ರವಾಸಿ ತಾಣವಾದ ಕೊಡಚಾದ್ರಿ ಬೆಟ್ಟ, ಜೈನರ ಪವಿತ್ರ ಯಾತ್ರಾ ಸ್ಥಳವಾದ ಹೊಂಬುಜಕ್ಕೆ ಉತ್ತರಭಾರತದಿಂದ ಬರುವ ಭಕ್ತಾದಿಗಳಿಗೆ ಅನುಕೂಲವಾಗಲಿದೆ.

ಹಾಗೆಯೇ ಪ್ರತಿನಿತ್ಯ ಕುಂದಾಪುರ ಸಿದ್ದಾಪುರ ಬೈಂದೂರು,ನಗರ, ಹೊಸನಗರ, ತೀರ್ಥಹಳ್ಳಿ,  ಆರಗ ಗುಡ್ಡೆಕೊಪ್ಪ,ಕೋಣಂದೂರು. ಹುಂಚ. ಗರ್ತಿಕೆರೆ ಹೆದ್ದಾರಿಪುರ,ಮುಗುಡ್ತಿ. ರಿಪ್ಪನ್ ಪೇಟೆ ಸೇರಿದಂತೆ ವಿವಿಧೆಡೆಗಳಿಂದ ದಿನನಿತ್ಯ ಬೆಂಗಳೂರು ಹಾಗೂ ಮೈಸೂರು ನಗರಕ್ಕೆ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ. ವಾಣಿಜ್ಯ ಉದ್ಯಮಿಗಳಿಗೆ ಕೂಲಿಕಾರ್ಮಿಕರಿಗೆ. ವಿದ್ಯಾರ್ಥಿಗಳಿಗೆ,ರೈತ ನಾಗರಿಕರುಗಳಿಗೆ ಅನುಕೂಲವಾಗಲಿದೆ.  ಆದ್ದರಿಂದ ಅರಸಾಳು ರೈಲ್ವೆ ನಿಲ್ದಾಣದ ಮೂಲಕ  ಸಂಚರಿಸುವ ಪ್ರತಿಯೊಂದು ರೈಲುಗಳು ಅರಸಾಳು ರೈಲ್ವೆ ನಿಲ್ದಾಣದಲ್ಲಿ   ನಿಲುಗಡೆ ಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಸಾರ್ವಜನಿಕರೊಂದಿಗೆ  ಕಾಂಗ್ರೆಸ್ ಪಕ್ಷದ ರಾಜ್ಯ ಹಾಗೂ ಜಿಲ್ಲಾ ಮುಖಂಡರುಗಳ ಸಹಕಾರದೊಂದಿಗೆ  ಅರಸಾಳು ರೈಲ್ವೆ ನಿಲ್ದಾಣದ ಎದುರು ಬೃಹತ್ ಪ್ರತಿಭಟನೆಯನ್ನು ಶೀಘ್ರದಲ್ಲಿಯೇ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

6 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

7 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago