ಜನಪ್ರತಿನಿಧಿ ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ನಶಿಸುತ್ತಿದೆ ಇತಿಹಾಸ ಪ್ರಸಿದ್ದ ಆಂಜನೇಯ ದೇವಸ್ಥಾನ :

ತೀರ್ಥಹಳ್ಳಿ : ತಾಲೂಕಿನ ಮಾಳೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಶಿವಮೊಗ್ಗ – ತೀರ್ಥಹಳ್ಳಿಯ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಇತಿಹಾಸ ಪ್ರಸಿದ್ದ ಆಂಜನೇಯ ದೇವಸ್ಥಾನ ಸರ್ಕಾರದ ಯಾವುದೇ ಸೌಲಭ್ಯವಿಲ್ಲದೆ ನಶಿಸುತ್ತಿದೆ.


ಆಂಜನೇಯ ದೇವಸ್ಥಾನದಲ್ಲಿ ಪ್ರತಿದಿನ ಪೂಜೆ ಏನೋ ನೆಡೆಯುತ್ತಿದೆ. ಆದರೆ ಸರ್ಕಾರದಿಂದ ಯಾವುದೇ ಸೌಲಭ್ಯ ಕೂಡ ದೇವಸ್ಥಾನಕ್ಕೆ ದೊರಕುತ್ತಿಲ್ಲ. ಚುನಾವಣೆ ಸಮಯದಲ್ಲಿ ದೇವಸ್ಥಾನಕ್ಕೆ ಹಲವು ಬಾರಿ ಈಗಿನ ಗೃಹ ಸಚಿವರು ಅದ ಆರಗ ಜ್ಞಾನೇಂದ್ರ  ಮತ್ತು ಮಾಜಿ ಶಾಸಕರು ಆಗಿರುವ ಕಿಮ್ಮನೆ ರತ್ನಾಕರ್ ಭೇಟಿ ನೀಡಿದ ದೇವಸ್ಥಾನವನ್ನು ಸುಧಾರಣೆಪಡಿಸುವುದಾಗಿ ಭರಪೂರ ಭರವಸೆ ನೀಡುತ್ತಾರೆಯೇ ಹೊರತು ಯಾವುದೇ ರೀತಿಯ ಪ್ರಯೋಜನ ಆಗಿಲ್ಲ.

ಹಲವಾರು ವರ್ಷಗಳ ಇತಿಹಾಸವಿರುವ ಈ ಆಂಜನೇಯ ದೇಗುಲವನ್ನು ಅಭಿವೃದ್ಧಿ ಪಡಿಸುವಲ್ಲಿ ಸ್ಥಳೀಯ ರಾಜಕಾರಣಿಗಳಿಗೂ ಮನಸಿದ್ದಂತೆ ಇಲ್ಲ.ಕೇವಲ ಚುನಾವಣ ಸಮಯದಲ್ಲಿ ಮಾತ್ರ ನೀಡುವ ಭರವಸೆ ಕೇಳಿ ಕೇಳಿ ಇಲ್ಲಿನ ಜನರು ಬೇಸತ್ತು ಹೋಗಿದ್ದಾರೆ.

ಕಣ್ಣು ಮುಚ್ಚಿ ಕುಳಿತಿರುವ ಮುಜರಾಯಿ ಇಲಾಖೆ !?

ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಸಂಬಂಧಪಟ್ಟಿದ್ದರು ಇಲ್ಲಿಯವರೆಗೆ ಯಾವುದೇ ಅಧಿಕಾರಿಗಳು ಈ ಬಗ್ಗೆ ಗಮನವಹಿಸಿಲ್ಲ. ಕೇವಲ ಹುಂಡಿ ಹಣ ಸಂಗ್ರಹಿಸಲು ಓಡೋಡಿ ಬರುವ ಅಧಿಕಾರಿಗಳಿಗೆ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವಲ್ಲಿ ಏನೋ ಒಂಥರಾ ಆಲಸ್ಯ!!!!! ಅಧಿಕಾರಿಗಳಿ ಈ ದೇವಸ್ಥಾನದ ಸಮಸ್ಯೆ ಬಗೆಹರಿಸುವ ಹುಮ್ಮಸ್ಸು ಯಾಕಿಲ್ಲ ಎಂಬ ಪ್ರೆಶ್ನೆ ಅಲ್ಲಿನ ಸಾರ್ವಜನಿಕರಿಂದ ಕೇಳಿಬರುತ್ತಿದೆ.

ದೇವಸ್ಥಾನದ ಅರ್ಚಕರಿಗೆ ಇಲ್ಲಿಯವರೆಗೆ ಸಂಬಳ ಎನ್ನುವುದೇ ಇಲ್ಲ !

ದೇವಸ್ಥಾನದಲ್ಲಿ ಪ್ರತಿದಿನ ಪೂಜೆ ಮಾಡುವ ಅರ್ಚಕರಿಗೆ ಇಲ್ಲಿಯವರೆಗೆ ಸಂಬಳ ಎನ್ನುವುದೇ ಇಲ್ಲವಂತೆ. ಅದನ್ನು ಕೇಳಲು ಹೋದರೆ ಅದರ ಬಗ್ಗೆ ಯಾವುದೇ ರೀತಿಯ ಮಾಹಿತಿ ನೀಡುವುದಿಲ್ಲ ಎಂದು ಹೇಳುತ್ತಾರೆ. ದೇವಸ್ಥಾನದ ಹುಂಡಿಯ ಹಣ ಬೇಕು, ಪೂಜೆ ಮಾಡಲು ಅರ್ಚಕರು ಬೇಕು, ಅವರಿಗೆ ಸಂಬಳ ಕೊಡಲು ಮುಜರಾಯಿ ಇಲಾಖೆಗೆ ಯೋಗ್ಯತೆ ಇಲ್ಲವೇ ಎಂದು ದೇವಸ್ಥಾನದ ಸಮಸ್ಯೆ ಬಗ್ಗೆ ಇಲ್ಲಿನ ಭಕ್ತಾಧಿಗಳು ಮಾತನಾಡಿಕೊಳ್ಳುತಿದ್ದಾರೆ.





ವರದಿ : ಅಕ್ಷಯ್ ಕುಮಾರ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

41 minutes ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

5 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

7 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

19 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

19 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

22 hours ago