ರಿಪ್ಪನ್ ಪೇಟೆ : ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ರವರ ನೇತೃತ್ವದಲ್ಲಿ ಜುಲೈ 4 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಗವಟೂರು ಗ್ರಾಮದಲ್ಲಿ ಸಮುದಾಯ ಆಸ್ಪತ್ರೆಗೆ ಕಾಯ್ದಿರಿಸಿರುವ ಸ್ಥಳದಿಂದ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಪಾದಯಾತ್ರೆ ನಡೆಸಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಹೇಳಿದರು.
ಪಟ್ಟಣದಲ್ಲಿ ಇಂದು ಪೂರ್ವಭಾವಿ ಸಭೆ ನಡೆಸಿ ನಂತರ ಮಾತನಾಡಿದ ಅವರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವಂತೆ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರವರ ಅವಧಿಯಲ್ಲಿ ಸಮುದಾಯ ಆಸ್ಪತ್ರೆಗೆ ಗವಟೂರು ಗ್ರಾಮದ ಸರ್ವೆ ನಂ 59 ರಲ್ಲಿ 5 ಎಕರೆ ಜಾಗ ಕಾಯ್ದಿರಿಸಲಾಗಿತ್ತು.ಆದರೆ ಕಳೆದ ಆರು ವರ್ಷಗಳಿಂದ ಯಾವುದೇ ಪ್ರಕ್ರೀಯೆ ನಡೆದಿಲ್ಲ ಈಗ ಶಿವಮೊಗ್ಗ ಜಿಲ್ಲೆಗೆ ನಾಲ್ಕು ಸಮುದಾಯ ಆಸ್ಪತ್ರೆ ಮಂಜೂರಾಗಿರುವ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಗೆ ಸಮುದಾಯ ಆಸ್ಪತ್ರೆ ಮಂಜೂರು ಮಾಡಿಸುವಂತೆ ಒತ್ತಾಯಿಸಿ ಗವಟೂರು ಗ್ರಾಮದಿಂದ ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ವರೆಗೆ ಪಾದಯಾತ್ರೆ ನಡೆಸಿ ಬೃಹತ್ ಪ್ರತಿಭಟನಾ ಸಭೆಯನ್ನು ಏರ್ಪಡಿಸಲಾಗಿದೆ ಎಂದರು.
ಈ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ,ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ,ರಾಜ್ಯ ಕಾಂಗ್ರೆಸ್ ಸಹಕಾರ ವಿಭಾಗದ ಸಂಚಾಲಕರಾದ ಆರ್ ಎಂ ಮಂಜುನಾಥಗೌಡ ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್,ತಾಲೂಕ್ ಅಧ್ಯಕ್ಷರಾದ ಬಿ ಜಿ ನಾಗರಾಜ್ ಹಾಗೂ ಇನ್ನೂ ಅನೇಕ ರಾಜ್ಯ ಹಾಗೂ ಜಿಲ್ಲಾ ಮುಖಂಡರುಗಳು ಮತ್ತು ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ,ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದು ಇದು ಪಕ್ಷಾತೀತ ಪ್ರತಿಭಟನೆಯಾಗಿದ್ದು ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್, ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ್,ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ,ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಎಂ ಪರಮೇಶ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ,ಎಪಿಎಂಸಿ ಮಾಜಿ ಅಧ್ಯಕ್ಷರಾದ ಈಶ್ವರಪ್ಪ ಗೌಡ ,ಗ್ರಾಪಂ ಸದಸ್ಯರಾದ ಮಧುಸೂಧನ್ ,ಗಣಪತಿ ,ಧನಲಕ್ಷ್ಮಿ,ವೇದಾವತಿ ಪರಮೇಶ್,ಸಾರಾಬಿ ,ಶ್ರೀಮಂತ್ ದೂನ ಮತ್ತು ಮುಖಂಡರಾದ ಉಲ್ಲಾಸ್ ,ನಾಗೇಂದ್ರ, ಸುಂದರ್ ಹಾಗೂ ಇನ್ನಿತರರಿದ್ದರು.
ವೀಡಿಯೋ ಇಲ್ಲಿ ವೀಕ್ಷಿಸಿ👇