ಜುಲೈ 4 ರ ಸೋಮವಾರ ಕಾಂಗ್ರೆಸ್ ಪಕ್ಷದ ವತಿಯಿಂದ ರಿಪ್ಪನ್‌ಪೇಟೆಯಲ್ಲಿ ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ :

ರಿಪ್ಪನ್ ಪೇಟೆ :  ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ರವರ ನೇತೃತ್ವದಲ್ಲಿ ಜುಲೈ 4 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಗವಟೂರು ಗ್ರಾಮದಲ್ಲಿ ಸಮುದಾಯ ಆಸ್ಪತ್ರೆಗೆ ಕಾಯ್ದಿರಿಸಿರುವ ಸ್ಥಳದಿಂದ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಪಾದಯಾತ್ರೆ ನಡೆಸಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಹೇಳಿದರು.


ಪಟ್ಟಣದಲ್ಲಿ ಇಂದು ಪೂರ್ವಭಾವಿ ಸಭೆ ನಡೆಸಿ ನಂತರ ಮಾತನಾಡಿದ ಅವರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವಂತೆ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರವರ ಅವಧಿಯಲ್ಲಿ ಸಮುದಾಯ ಆಸ್ಪತ್ರೆಗೆ ಗವಟೂರು ಗ್ರಾಮದ ಸರ್ವೆ ನಂ 59 ರಲ್ಲಿ 5 ಎಕರೆ ಜಾಗ ಕಾಯ್ದಿರಿಸಲಾಗಿತ್ತು.ಆದರೆ ಕಳೆದ ಆರು ವರ್ಷಗಳಿಂದ ಯಾವುದೇ ಪ್ರಕ್ರೀಯೆ ನಡೆದಿಲ್ಲ ಈಗ ಶಿವಮೊಗ್ಗ ಜಿಲ್ಲೆಗೆ ನಾಲ್ಕು ಸಮುದಾಯ ಆಸ್ಪತ್ರೆ ಮಂಜೂರಾಗಿರುವ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಗೆ ಸಮುದಾಯ ಆಸ್ಪತ್ರೆ ಮಂಜೂರು ಮಾಡಿಸುವಂತೆ ಒತ್ತಾಯಿಸಿ ಗವಟೂರು ಗ್ರಾಮದಿಂದ ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ವರೆಗೆ ಪಾದಯಾತ್ರೆ ನಡೆಸಿ ಬೃಹತ್ ಪ್ರತಿಭಟನಾ ಸಭೆಯನ್ನು ಏರ್ಪಡಿಸಲಾಗಿದೆ ಎಂದರು.

ಈ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ,ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ,ರಾಜ್ಯ ಕಾಂಗ್ರೆಸ್ ಸಹಕಾರ ವಿಭಾಗದ ಸಂಚಾಲಕರಾದ ಆರ್ ಎಂ ಮಂಜುನಾಥಗೌಡ ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್,ತಾಲೂಕ್ ಅಧ್ಯಕ್ಷರಾದ ಬಿ ಜಿ ನಾಗರಾಜ್ ಹಾಗೂ ಇನ್ನೂ ಅನೇಕ ರಾಜ್ಯ ಹಾಗೂ ಜಿಲ್ಲಾ ಮುಖಂಡರುಗಳು ಮತ್ತು ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ,ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದು ಇದು ಪಕ್ಷಾತೀತ ಪ್ರತಿಭಟನೆಯಾಗಿದ್ದು ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್, ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ್,ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ,ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಎಂ ಪರಮೇಶ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ,ಎಪಿಎಂಸಿ ಮಾಜಿ ಅಧ್ಯಕ್ಷರಾದ ಈಶ್ವರಪ್ಪ ಗೌಡ ,ಗ್ರಾಪಂ ಸದಸ್ಯರಾದ ಮಧುಸೂಧನ್ ,ಗಣಪತಿ ,ಧನಲಕ್ಷ್ಮಿ,ವೇದಾವತಿ ಪರಮೇಶ್,ಸಾರಾಬಿ ,ಶ್ರೀಮಂತ್ ದೂನ ಮತ್ತು ಮುಖಂಡರಾದ ಉಲ್ಲಾಸ್ ,ನಾಗೇಂದ್ರ, ಸುಂದರ್ ಹಾಗೂ ಇನ್ನಿತರರಿದ್ದರು.

ವೀಡಿಯೋ ಇಲ್ಲಿ ವೀಕ್ಷಿಸಿ👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

4 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

6 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

18 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

18 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

21 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

21 hours ago