ದೇವಸ್ಥಾನ ಹುಂಡಿಗೆ ಕನ್ನ ಹಾಕಿದ ಇಬ್ಬರು ಖದೀಮರ ಬಂಧನ : ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶ

ಭದ್ರಾವತಿ : ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ‌ ಹುಂಡಿಗೆ ಕನ್ನ ಹಾಕಿದ ಇಬ್ಬರನ್ನು ಸೋಮವಾರ ಬಂಧಿಸಲಾಗಿದೆ.

ಭದ್ರಾವತಿಯ ಹೊಸಮನೆ ನಿವಾಸಿ ವಸಂತರಾಜು ಅಲಿಯಾಸ್ ವಸಂತ(37), ಬೇಡರ ಹೊಸಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತರು.

ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ₹20,000 ರಿಂದ ₹30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದ ‌ತಂಡ ಕಾರ್ಯಾಚರಣೆ ‌ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ಘಟನೆಯ ಹಿನ್ನಲೆ

ಜೂನ್ 13ರಂದು ಗ್ರಾಮಾಂತರ ಠಾಣೆಯ ಸಿಬ್ಬಂದಿಗಳಾದ ನಾಗರಾಜ್ ಎಂ,ಆದರ್ಶ್ ಜಿ ,ಉದಯ್ ಕುಮಾರ್ ಹೆಚ್ ಕೆ ಜಂಕ್ಷನ್ ಬಳಿ ವಿಶೇಷ ಗಸ್ತಿನಲ್ಲಿದ್ದಾಗ ವಸಂತ್ ಎಂಬುವವನು ಅನುಮಾನಸ್ಪದವಾಗಿ ತಿರುಗಾಡುತ್ತಿದ್ದದನ್ನು ಕಂಡು ವಶಕ್ಕೆ ಪಡೆದು ಪಿಐ ಮುಂದೆ ಹಾಜರು ಪಡಿಸಿದ್ದಾರೆ.ನಂತರ ಕೂಲಂಕುಷವಾಗಿ ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದನ್ನು ಬಾಯಿ ಬಿಟ್ಟಿದ್ದಾನೆ.

₹10 ಲಕ್ಷ‌ ಮೌಲ್ಯದ ಚಿನ್ನ, ಬೆಳ್ಳಿಯ ಆಭರಣ ಸೀಜ್


ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ 1 ದೇವಸ್ಥಾನ ಕಳ್ಳತನ ಪ್ರಕರಣ, ಪೇಪರ್ ಟೌನ್ ಪೊಲೀಸ್ ಠಾಣೆ ಮತ್ತು ಹೊಳೆಹೊನ್ನೂರು ಪೊಲೀಸ್ ಠಾಣೆಯ 2 ಹಗಲು ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ₹10,25,000 ಒಟ್ಟು 220 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು 132 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಮತ್ತು ₹5000/- ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ.

ಈ ಕಾರ್ಯಾಚರಣೆಯನ್ನು ಎಸ್ಪಿ ಲಕ್ಷ್ಮಿಪ್ರಸಾದ್ ,ಎಎಸ್ಪಿ  ವಿಕ್ರಂ ಅಮ್ಟೆ ಮತ್ತು ಡಿವೈಎಸ್ಪಿ ಜಿತೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಭದ್ರಾವತಿ ಗ್ರಾಮಾಂತರ ಪಿಐ ಗುರುರಾಜ್,ಸಿಬ್ಬಂದಿಗಳಾದ ನಾಗರಾಜ್ ಎಂ,ಆದರ್ಶ್ ಜಿ,ಉದಯ್ ಕುಮಾರ್ ,ಶಿವಪ್ಪ ಎಂ ಹೆಚ್,ವಿನಾಯಕ ,ಜಗದೀಶ್ ,ಪ್ರಕಾಶ್ ಜಿ ಕೆ ,ಗಿರೀಶ್ ನಾಯ್ಕ್ ,ಮತ್ತು ಪ್ರಭು ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

2 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

7 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

9 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

21 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

21 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

23 hours ago