ಬುಧವಾರ ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ಮತ್ತು ರೋಹಿತ್ ಚಕ್ರತೀರ್ಥ ವಿರುದ್ಧ ಜೂ.15ರಂದು ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಯಲ್ಲಿದ್ದು, ಪಠ್ಯ ಪರಿಷ್ಕರಣೆ ಕೈಬಿಟ್ಟು ಹಿಂದಿನ ಬರಗೂರು ರಾಮಚಂದ್ರಪ್ಪ ಅವರ ಪಠ್ಯವನ್ನೇ ಮುಂದುವರಿಸಬೇಕು. ಈ ಪಾದಯಾತ್ರೆ ಪಕ್ಷಾತೀತವಾಗಿ ನಡೆಯಲಿದ್ದು ಎಲ್ಲಾ ಪಕ್ಷದವರು ಪಾಲ್ಗೊಂಡು ತಮ್ಮ ಅಭಿಪ್ರಾಯ ಮಂಡಿಸಬಹುದು ಎಂದರು.
ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಸಾಹಿತಿಗಳಾದ ಎಸ್.ಜಿ.ಸಿದ್ದರಾಮಯ್ಯ, ಕುಂ.ವೀರಭದ್ರಪ್ಪ, ಡಾ.ರಾಜೇಂದ್ರ ಚನ್ನಿ ಸೇರಿದಂತೆ ರಾಜ್ಯದ ವಿವಿಧ ಸಾಹಿತಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಡಿನ ಎಲ್ಲಾ ಕ್ಷೇತ್ರಗಳ ಪ್ರಮುಖರನ್ನು ಪಾದಯಾತ್ರೆಗೆ ಆಹ್ವಾನಿಸಲಾಗಿದೆ. ಬೆಳಗ್ಗೆ 7 ಗಂಟೆಗೆ ಕವಿಶೈಲದಿಂದ ಆರಂಭಗೊಂಡು ಮಧ್ಯಾಹ್ನ 1 ಗಂಟೆಗೆ ತೀರ್ಥಹಳ್ಳಿ ತಲುಪಲಿದೆ. ಸಾಕಷ್ಟು ಸಮಯಾವಕಾಶ ಪಡೆದು, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಬರಗೂರು ಸಮಿತಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿತ್ತು. ಆದರೀಗ ಏಕಾಏಕಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿದೆ. ಸಮಿತಿ ರದ್ದು ಮಾಡಿದರೆ ಸಾಲದು, ಪಠ್ಯಪುಸ್ತಕವನ್ನೇ ರದ್ದು ಮಾಡಬೇಕು ಎಂದರು.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇