ತೀರ್ಥಹಳ್ಳಿ : ತಾಲೂಕಿನ ಹಾದಿಗಲ್ಲು ಸಮೀಪ ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನ ಸ್ಥಳೀಯರೇ ಬಂಧಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನೆಡೆದಿದೆ.
ಗುರುವಾರ ಸಂಜೆ ಹಾದಿಗಲ್ಲು ಗ್ರಾಪo ವ್ಯಾಪ್ತಿಯ ಕರಡಿಗ ಗ್ರಾಮದ ಸಿದ್ದಾಪುರದಲ್ಲಿ ದಿ|| ಲಕ್ಷ್ಮಣ್ ರವರ ಮನೆಯಲ್ಲಿ ಅವರ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿ ಕುತ್ತಿಗೆಯಲ್ಲಿದ್ದ ಸರ ಕಸಿದು ಇಬ್ಬರು ಅಪರಿಚಿತರು ಪರಾರಿಯಾಗಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಒಬ್ಬನನ್ನು ಸ್ಥಳೀಯರು ಬಂಧಿಸಿ ಕೃತ್ಯಕೆ ಬಳಸಿದ 1 ಕಾರಿನ ಸಮೇತ ಸ್ಥಳೀಯ ಪೊಲೀಸರ ವಶಕ್ಕೆ ನೀಡಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಗೃಹ ಸಚಿವರ ತವರು ಕ್ಷೇತ್ರದಲ್ಲಿ ಇಂತಹ ಘಟನೆಗಳು ದಿನದಿಂದ ದಿನಕ್ಕೆ ನಡೆಯುತ್ತಿರುವುದು ಸಾರ್ವಜನಿಕರಲ್ಲಿ ಮತ್ತಷ್ಟು ಭಯ ಹುಟ್ಟಿಸಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.