Headlines

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಸರಗಳ್ಳತನಕ್ಕೆ ಯತ್ನ : ಖದೀಮನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ತೀರ್ಥಹಳ್ಳಿ :  ತಾಲೂಕಿನ ಹಾದಿಗಲ್ಲು ಸಮೀಪ  ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನ ಸ್ಥಳೀಯರೇ ಬಂಧಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನೆಡೆದಿದೆ.

ಗುರುವಾರ ಸಂಜೆ ಹಾದಿಗಲ್ಲು ಗ್ರಾಪo ವ್ಯಾಪ್ತಿಯ ಕರಡಿಗ ಗ್ರಾಮದ ಸಿದ್ದಾಪುರದಲ್ಲಿ ದಿ|| ಲಕ್ಷ್ಮಣ್ ರವರ ಮನೆಯಲ್ಲಿ ಅವರ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿ  ಕುತ್ತಿಗೆಯಲ್ಲಿದ್ದ ಸರ ಕಸಿದು ಇಬ್ಬರು ಅಪರಿಚಿತರು ಪರಾರಿಯಾಗಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಒಬ್ಬನನ್ನು ಸ್ಥಳೀಯರು ಬಂಧಿಸಿ ಕೃತ್ಯಕೆ ಬಳಸಿದ 1 ಕಾರಿನ ಸಮೇತ ಸ್ಥಳೀಯ ಪೊಲೀಸರ ವಶಕ್ಕೆ ನೀಡಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಗೃಹ ಸಚಿವರ ತವರು ಕ್ಷೇತ್ರದಲ್ಲಿ ಇಂತಹ ಘಟನೆಗಳು ದಿನದಿಂದ ದಿನಕ್ಕೆ  ನಡೆಯುತ್ತಿರುವುದು ಸಾರ್ವಜನಿಕರಲ್ಲಿ ಮತ್ತಷ್ಟು ಭಯ ಹುಟ್ಟಿಸಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

Exit mobile version