ಪತ್ರಕರ್ತರ ಆರೋಗ್ಯ ಚೆನ್ನಾಗಿದ್ದರೆ ಸುದ್ದಿ ಕೂಡಾ ಆರೋಗ್ಯಕರವಾಗಿರುತ್ತದೆ : ಎಸ್.ರುದ್ರೇಗೌಡ

ಶಿವಮೊಗ್ಗ ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗಾಗಿ ನಗರದ ಮೇಟ್ರೋ ಯುನೈಟೆಡ್‌ ಹೆಲ್ತ್‌ ಕೇರ್‌ ಆಸ್ಪತ್ರೆ ಹಾಗೂ ಹೃದಯ ಸ್ಪೆಷಾಲಿಟಿ ಕ್ಲಿನಿಕ್‌ ಸಹಯೋಗದೊಂದಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಭಾನುವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ವಿಧಾನ ಪರಿಷತ್‌ ಸದಸ್ಯರಾದ ಎಸ್ ರುದ್ರೇಗೌಡ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ನಿತ್ಯ ಒತ್ತಡದ ಕೆಲಸದಲ್ಲಿ ತೊಡಗಿಸಿಕೊಳ್ಳುವ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇಂತಹದೊಂದು ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ನಿಜಕ್ಕೂ ಒಳ್ಳೆಯ ಕೆಲಸ. ರಾಜಕಾರಣಿಗಳ ಹಾಗೆಯೇ ಅನೇಕ ಸಮಯದಲ್ಲಿ ಊಟ ತಿಂಡಿ, ನಿದ್ರೆಗಳೆಲ್ಲವೂ  ಪತ್ರಕರ್ತರಿಗೆ ಮರೀಚಿಕೆಯಾಗಿರುತ್ತವೆ. ಸಮಯದ ಪರಿವೆಯೇ ಇಲ್ಲದೆ ಕೆಲಸಮಾಡಬೇಕಾದ ಪರಿಸ್ಥಿತಿಗಳು ಇರುತ್ತವೆ. ಹಾಗಾಗಿ ಅವರಿಗೆ ಆರೋಗ್ಯ ತಪಾಸಣೆ ಅವಶ್ಯಕತೆ ಇದೆ. ಪತ್ರಕರ್ತರ ಆರೋಗ್ಯ ಚೆನ್ನಾಗಿದ್ದರೆ ಸುದ್ದಿಕೂಡವೂ ಆರೋಗ್ಯವಾಗಿರುತ್ತದೆ ಎಂದರು.

ಪತ್ರಕರ್ತರಿಗಾಗಿ ಮೇಟ್ರೋ ಯುನೈಟೆಡ್‌ ಹೆಲ್ತ್‌ ಕೇರ್‌ ಆಸ್ಪತ್ರೆ ಹಾಗೂ ಹೃದಯ ಸ್ಪೆಷಾಲಿಟಿ ಕ್ಲಿನಿಕ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು ನಿಜಕ್ಕೂ ಶ್ಲಾಘನೀಯವಾದದ್ದು. ಶಿವಮೊಗ್ಗದ ಎಲ್ಲಾ ಆಸ್ಪತ್ರೆಗಳು ಕೂಡ ಪತ್ರಕರ್ತರಿಗೆ ಇಂತಹ ಶಿಬಿರ ಹಮ್ಮಿಕೊಳ್ಳಲಿ ಎಂದು ಸಲಹೆ ನೀಡಿದರಲ್ಲದೆ, ಪತ್ರಕರ್ತರು ಈ ಆರೋಗ್ಯ ತಪಾಸಣೆ ಶಿಬಿರವನ್ನು ಸದುಪಯೋಗ ಪಡೆದುಕೊಳ್ಳಲಿ.ಹಾಗೆಯೇ ಅವರೆಲ್ಲರೂ ಆರೋಗ್ಯವಾಗಿ ಕೆಲಸದಲ್ಲಿ ತೊಡಗಿಸಿಕೊಳ್ಳಲಿ ಎಂದರು.ಇದೇ ವೇಳೆ ಅವರು ಪತ್ರಕರ್ತರಾಗಿ ಕೆಲಸ ಮಾಡುವವರ ಕುಟುಂಬದವರಿಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇಂತಹ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಿ ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿಧಾನ ಪರಿಷತ್‌ ಶಾಸಕರಾದ ಆಯನೂರು ಮಂಜುನಾಥ್‌ ಮಾತನಾಡಿ, ಸಮಾಜದಲ್ಲಿ ರಾಜಕಾರಣಿಗಳು ಹಾಗೂ ಪತ್ರಕರ್ತರು ಇಬ್ಬರೂ ಒಂದೇ ಬಗೆಯ ಜನರು.ಅವರ ನಾಡಿಮಿಡಿತಗಳನ್ನು ಅಷ್ಟು ಸುಲಭವಾಗಿ ಪತ್ತೆ ಹಚ್ಚಲಾಗೋದಿಲ್ಲ ಎಂಬ ಹಾಸ್ಯದ ಮಾತುಗಳೊಂದಿಗೆ ಪತ್ರಕರ್ತರ ಮಹತ್ವದ ಕುರಿತು ಮಾತನಾಡಿದರು. ಪತ್ರಕರ್ತರು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಅವರಿಗೆ ಆರೋಗ್ಯ ತುಂಬಾನೆ ಮುಖ್ಯವಾಗುತ್ತದೆ. ಹಾಗೆಯೇ ಹೃದಯ ಮತ್ತು ಹೃದಯವಂತಿಕೆಯೂ ಇರಬೇಕಾಗುತ್ತದೆ.ಈಗ ಪತ್ರಿಕೋದ್ಯಮ ಹಿಂದಿನಂತಿಲ್ಲ.ವರದಿಗಳೇ ಪರ್ತಕರ್ತರ ಅಭಿಪ್ರಾಯಗಳಾಗಿ ಪರಿವರ್ತನೆ ಆಗುತ್ತಿವೆ.ಇದು ಸಮಾಜಕ್ಕೆ ತಪ್ಪು ಸಂದೇಶ ಹೊಂದಂತಾಗುತ್ತದೆ. ವರದಿಯೇ ಬೇರೆ, ಅಭಿಪ್ರಾಯವೇ ಬೇರೆ. ಅದನ್ನು ಅವರು ವರ್ಗಿಕರಿಸಿಯೇ ಪತ್ರಿಕೆಗಳನ್ನು ತರಬೇಕಿದೆ. ಪತ್ರಕರ್ತರು ಚೆನ್ನಾಗಿದ್ದರೆ ಸಮಾಜವೂ ಚೆನ್ನಾಗಿರುತ್ತದೆ ಎಂದರು.

ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಕೆ.ಈ. ಕಾಂತೇಶ್‌ ಮಾತನಾಡಿ, ಸಮಾಜದ ಓರೆಕೋರೆಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು. ಅವರ ಸಹಾಯಕ್ಕೆ ನಾನು ಮತ್ತು ನಮ್ಮ ಕುಟುಂಬ ಸದಾ ಸಿದ್ದವಿದೆ. ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಮೆಟ್ರೋ ಆಸ್ಪತ್ರೆಯಲ್ಲಿ ತಪಾಸಣೆ ಮತ್ತು ಚಿಕಿತ್ಸೆಗೆ ಶೇ.20 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಘೋಷಿಸಿದರು. ಇದೇ ವೇಳೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು, ಇನ್ನು ಹೆಚ್ಚಿನ ರಿಯಾಯಿತಿ ನೀಡುವಂತೆ ಮಾಡಿಕೊಂಡ ಮನವಿಗೆ ಅಲ್ಲಿಯೇ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ದಿನಗಳಲ್ಲಿ ಆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಭರವಸೆ ನೀಡಿದರು.

ಶಿವಮೊಗ್ಗ ನಗರಾಭಿವೃದ್ದಿ ಪ್ರಾಧಿಕಾರಿ ಮಾಜಿ ಅಧ್ಯಕ್ಷರಾದ   ಎಸ್.‌ ಎಸ್.‌ ಜ್ಯೋತಿ ಪ್ರಕಾಶ್‌ ಮಾತನಾಡಿ, ಪತ್ರಕರ್ತರು ತಮ್ಮ ಒತ್ತಡ ಕೆಲಸದ ನಡುವೆಯೂ ಆರೋಗ್ಯಕ್ಕೆ ಅಂತಲೇ ಒಂದಷ್ಟು ಸಮಯವನ್ನು ಮೀಸಲಿಡಬೇಕು. ಈಗ ಆರೋಗ್ಯಕರವಾಗಿರಲು ಯೋಗವೂ ಪ್ರಮುಖ ಪಾತ್ರ ವಹಿಸುತ್ತಿದೆ. ನಿತ್ಯವೂ ಒಂದಷ್ಟು ಸಮಯ ಯೋಗ ಮಾಡುವುದರ ಮೂಲಕವೂ ಪತ್ರಕರ್ತರು ಒತ್ತಡವನ್ನು ರಿಲ್ಯಾಕ್ಸ್‌ ಮಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ  ಕೆ.ವಿ. ಶಿವಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರಿಗಾಗಿ ಆರೋಗ್ಯ ಶಿಬಿರ ಹಮ್ಮಿಕೊಳ್ಳುವುದಕ್ಕೆ ಕಾರಣವಾದ ವಿಚಾರವನ್ನು ಹಂಚಿಕೊಂಡರು. ಹಾಗೆಯೇ ಮೆಟ್ರೋ ಆಸ್ಪತ್ರೆ ಮತ್ತು ಹೃದಯ ಸ್ಪೆಷಾಲಿಟಿ ಕ್ಲಿನಿಕ್‌ ಸಹಾಯಕ್ಕೆ ಅಭಿನಂದನೆ ತಿಳಿಸಿದರು.

ಸಮಾರಂಭದಲ್ಲಿ  ಮೇಟ್ರೋ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪೃಥ್ವಿ ಬಿ.ಸಿ, ಹೃದಯ ರೋಗ ತಜ್ಞ ಮಹೇಶ ಮೂರ್ತಿ, ಮೇಟ್ರೋ ಸಿಇಓ ಡಾ. ತೇಜಸ್ವಿ ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

2 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

7 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

9 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

21 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

21 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

23 hours ago