Headlines

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದ ದರೋಡೆ ಆರೋಪಿ : ಮೆಗ್ಗಾನ್ ಗೆ ದಾಖಲು

ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆ ಕ್ರೈಮ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಎಂಬುವವರಿಗೆ ಚಾಕು ಇರಿಯಲಾಗಿದೆ.

ಪ್ರಕರಣವೊಂದರ ಸಂಬಂಧ ಆರೋಪಿ ಶಾಹಿದ್ ಖುರೇಷಿ ಎಂಬಾತನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಶಾಹಿದ್ ಖುರೇಷಿ ಪೊಲೀಸ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಗುರುನಾಯ್ಕ್ ಅವರ ಎದೆಗೆ ಚಾಕು ಇರಿದಿದ್ದಾನೆ. ರಮೇಶ್ ಅವರ ಕೈಗೆ ಗಾಯವಾಗಿದೆ. ದಾಳಿ ಮಾಡಿದ ದುಷ್ಕರ್ಮಿ ಶಾಹಿದ್ ಖುರೇಷಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

About The Author

Leave a Reply

Your email address will not be published. Required fields are marked *