ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕೊನೆಗೂ ಬಂತು108 ಆಂಬ್ಯುಲೆನ್ಸ್…..!?

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದುಕೊಂಡಿರುವ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ 108 ಆಂಬ್ಯುಲೆನ್ಸ್ ಇಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳು, ಮಹಿಳೆಯರು, ಅನಾರೋಗ್ಯವನ್ನು ಹೊಂದಿದ ಹಿರಿಯ ನಾಗರಿಕರುಗಳು ಹೈರಾಣಾಗಿ ಹೋಗಿದ್ದರು. ಹಲವಾರು ಬಾರಿ  ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ  108 ವಾಹನ ಸೌಲಭ್ಯ ನೀಡುವಂತೆ  ಮನವಿ ಸಲ್ಲಿಸಿದ್ದರು ಸಹ ವಾಹನದ ಸೌಲಭ್ಯವನ್ನು ನೀಡಿರಲಿಲ್ಲ.

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲ ಶ್ರುತಿ :

ಕಳೆದ ಮೂರು ದಿನಗಳ ಹಿಂದೆ ರಿಪ್ಪನ್ ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ನಡೆದ ಬೈಕುಗಳ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಬೈಕಿನಲ್ಲಿ ಸವಾರಿ ಮಾಡುತ್ತಿದ್ದ ತಂದೆ ಅಪಘಾತದಲ್ಲಿ ಮೃತಪಟ್ಟು ಮಗ ಹಾಗೂ ಇನ್ನೊಂದು ಬೈಕಿನ  ಸವಾರ ತೀವ್ರತರ ಗಾಯದಿಂದ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಸಾರ್ವಜನಿಕರು ಕರೆದುಕೊಂಡು ಬಂದು ಪ್ರಥಮ ಚಿಕಿತ್ಸೆಯನ್ನು ನೀಡಿ ಚಿಕಿತ್ಸೆಗಾಗಿ  ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಲು 108 ವಾಹನ ಇಲ್ಲದ ಕಾರಣ ಗಾಯಾಳುಗಳು ಸುಮಾರು ಎರಡು ಗಂಟೆಗಳ ಕಾಲ ಆಸ್ಪತ್ರೆಯಲ್ಲಿಯೇ ನರಳಾಡಿದ ಹೃದಯವಿದ್ರಾವಕ ಘಟನೆ ಕುರಿತು ಪೊಸ್ಟ್ ಮ್ಯಾನ್ ನ್ಯೂಸ್ ಸವಿಸ್ತಾರವಾಗಿ ವರದಿ ಮಾಡಿತ್ತು.

ಕೊನೆಗೂ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಬಂದ 108 ವಾಹನ:

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಹಿನ್ನೆಲೆಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ 108 ವಾಹನದ ಸೌಲಭ್ಯವನ್ನು ಕಲ್ಪಿಸಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

1 hour ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

6 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

8 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

20 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

20 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

22 hours ago