January 11, 2026

ಪ್ರಿಯತಮೆ ಕೈಕೊಟ್ಟಳೆಂದು ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ :

ಪ್ರೀತಿಸಿದ ಹುಡುಗಿ ಮೋಸ ಮಾಡಿದಳೆಂದು ನೊಂದ ಯುವಕ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ದಿಲೀಪ್ ಎಂಬಾತ ಮೃತ ಯುವಕನಾಗಿದ್ದಾನೆ.


ಕೆಲವು ವರ್ಷಗಳಿಂದ ದಿಲೀಪ್ ಮತ್ತು ಕುಟುಂಬಸ್ಥರು ಬೆಂಗಳೂರಿನಲ್ಲಿ ವಾಸವಿದ್ದುಕೊಂಡು ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದರು. ಯುವಕನಿಗೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದ ಯುವತಿಯೋರ್ವಳ ಪರಿಚಯವಾಗಿದ್ದು, ಬಳಿಕ ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಆದರೆ ನಂತರದ ದಿನಗಳಲ್ಲಿ ಮನೆಯವರ ಕಾರಣ ನೀಡಿ ಯುವತಿಯು ಪ್ರೀತಿ ನಿರಾಕರಿಸಿದ್ದಾಳೆ ಎನ್ನಲಾಗ್ತಿದೆ.

ಯುವತಿಯು ತನ್ನಿಂದ ಅಂತರ ಕಾಯ್ದುಕೊಂಡಿದ್ದಾಳೆ, ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಸೆಲ್ಫಿ ವಿಡಿಯೋ ಮಾಡಿ ದಿಲೀಪ್ ಬೆಟ್ಟದಕೂರ್ಲಿ ಗ್ರಾಮದ ಕೆರೆಯ ಏರಿ ಮೇಲೆ ವಿಷ ಸೇವಿಸಿದ್ದಾನೆ. ವಿಷದ ಬಾಟಲಿ ಜೊತೆ ದಿಲೀಪ್ ಬಿದ್ದಿರುವುದನ್ನು ಕಂಡ ಸ್ಥಳೀಯರು ಕೂಡಲೇ ಆತನನ್ನು ಶಿಕಾರಿಪುರ ಆಸ್ಪತ್ರೆಗೆ ದಾಖಲಿಸಿದ್ದರೂ ಆತ ಬದುಕುಳಿಯಲಿಲ್ಲ.

 ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *