Headlines

ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ :  ಮುಡುಬಾದ 15 ನೇ ಮೈಲಿಗಲ್ಲಿನ ಬಳಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ  ಬೈಕ್ ಸವಾರ ಸ್ಥಳದಲ್ಲೇ ಸತ್ತು ಹೋಗಿರುವ ಘಟನೆ  ಸೋಮವಾರ ರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಎದುರಿನಿಂದ ಬಂದ ಮೂಕಾಂಬಿಕ ಬಸ್ ನ ಸೈಡ್ ಗೆ ದ್ವಿಚಕ್ರವಾನ ತಗುಲಿದ ಪರಿಣಾಮ ಬಸ್ ನ ಹಿಂಬದಿ ಚಕ್ರ ದ್ವಿಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


15 ನೇ ಮೈಲಿಗಲ್ಲಿನ ಬಳಿ ಈ ಘಟನೆ ನಡೆದಿದೆ. ಸ್ಥಳದಲ್ಲಿ ಮೃತಪಟ್ಟ ವ್ಯಕ್ತಿಯನ್ನ ಮಣಿಕಂಠ(27) ಎಂದು ಗುರುತಿಸಲಾಗಿದೆ. ಹೆಲ್ಮೆಟ್ ಹಾಕದೆ ಬೈಕ್ ಚಲಾಯಿಸುತ್ತಿದ್ದ ಕಾರಣ ತಲೆಗೆ ಬಲವಾದ ಪೆಟ್ಟುಬಿದ್ದು ಮಣಿಕಂಠ ಸ್ಥಳದಲ್ಲಿಯೇ ಅಸುನೀಗಿದ್ದಾರೆ ಎನ್ನಲಾಗಿದೆ.

ಮಾಳೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

About The Author

Leave a Reply

Your email address will not be published. Required fields are marked *

Exit mobile version