ಶಿವಮೊಗ್ಗ: ನಿನ್ನೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಮೂವರ ಗೆಲುವು ಸಾಧಿಸಿದ್ದಾರೆ. ಮೋದಿ ಅವರಿಗೆ ರಾಜ್ಯ ನಿಮ್ಮ ಜೊತೆ ಇದೆ ಎನ್ನುವ ಸಂದೇಶ ಈ ಫಲಿತಾಂಶದಿಂದ ರವಾನೆಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ರಾಜ್ಯಸಭೆ ಚುನಾವಣಾ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೂರನೇ ಅಭ್ಯರ್ಥಿ ಗೆಲ್ಲಲ್ಲು ಸಿದ್ದರಾಮಯ್ಯ ಪಾತ್ರ ಪ್ರಮುಖವಾಗಿದೆ. ಮೂರನೇ ಅಭ್ಯರ್ಥಿ ಗೆಲ್ಲಲು ಕಾಂಗ್ರೆಸ್ ನೇರ ಕಾರಣ. ಈ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಪಕ್ಷವನ್ನು ಯಾರೂ ನಂಬುವುದಿಲ್ಲ. ಈ ಮೂಲಕ ಕಾಂಗ್ರೆಸ್ ಪಕ್ಷ ಅಲ್ಪ ಅಸಂಖ್ಯಾತರಿಗೆ ದ್ರೋಹ ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದ್ದಾರೆ.
ಇನ್ನು ನಳೀನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಮ್ಮ ಪಕ್ಷ ಸಂಘಟನೆಯಾಗುತ್ತಿದ್ದು, ಹಳ್ಳಿ ಹಳ್ಳಿಗಳಲ್ಲಿ ಪಕ್ಷ ಪ್ರಬಲವಾಗುತ್ತಿದೆ. ಬಿಜೆಪಿ ಕಾಂಗ್ರೆಸ್ ಜೊತೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಜನರು ಬಿಜೆಪಿಗೆ ಸ್ಪಷ್ಟ ಬಹುಮತ ನೀಡಬೇಕು ಎಂದು ಈಶ್ವರಪ್ಪ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್