Headlines

ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲ್ಲಲು ಸಿದ್ದರಾಮಯ್ಯನವರ ಕಾಣಿಕೆಯೂ ಇದೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ನಿನ್ನೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಮೂವರ ಗೆಲುವು ಸಾಧಿಸಿದ್ದಾರೆ. ಮೋದಿ ಅವರಿಗೆ ರಾಜ್ಯ ನಿಮ್ಮ ಜೊತೆ ಇದೆ ಎನ್ನುವ ಸಂದೇಶ ಈ ಫಲಿತಾಂಶದಿಂದ ರವಾನೆಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ರಾಜ್ಯಸಭೆ ಚುನಾವಣಾ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೂರನೇ ಅಭ್ಯರ್ಥಿ ಗೆಲ್ಲಲ್ಲು ಸಿದ್ದರಾಮಯ್ಯ ಪಾತ್ರ ಪ್ರಮುಖವಾಗಿದೆ. ಮೂರನೇ ಅಭ್ಯರ್ಥಿ ಗೆಲ್ಲಲು ಕಾಂಗ್ರೆಸ್ ನೇರ ಕಾರಣ. ಈ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಪಕ್ಷವನ್ನು ಯಾರೂ ನಂಬುವುದಿಲ್ಲ. ಈ ಮೂಲಕ ಕಾಂಗ್ರೆಸ್ ಪಕ್ಷ ಅಲ್ಪ ಅಸಂಖ್ಯಾತರಿಗೆ ದ್ರೋಹ ಮಾಡಿದೆ ಎಂದು ಕಾಂಗ್ರೆಸ್​ ವಿರುದ್ಧ ಲೇವಡಿ ಮಾಡಿದ್ದಾರೆ. 

ಇನ್ನು ನಳೀನ್​​ ಕುಮಾರ್​ ಕಟೀಲ್​ ಅವರ ನೇತೃತ್ವದಲ್ಲಿ ನಮ್ಮ ಪಕ್ಷ ಸಂಘಟನೆಯಾಗುತ್ತಿದ್ದು, ಹಳ್ಳಿ ಹಳ್ಳಿಗಳಲ್ಲಿ ಪಕ್ಷ ಪ್ರಬಲವಾಗುತ್ತಿದೆ. ಬಿಜೆಪಿ ಕಾಂಗ್ರೆಸ್ ಜೊತೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಜನರು ಬಿಜೆಪಿಗೆ ಸ್ಪಷ್ಟ ಬಹುಮತ ನೀಡಬೇಕು ಎಂದು ಈಶ್ವರಪ್ಪ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *