ಬಿದರಹಳ್ಳಿ ಶಾಲೆಗೆ ಜಿಲ್ಲಾ ಮಟ್ಟದ ಸ್ವಚ್ಚತಾ ಶಾಲಾ ಪ್ರಶಸ್ತಿ :


ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಈ ಬಾರಿಯ ಶಿವಮೊಗ್ಗ ಜಿಲ್ಲಾ ಮಟ್ಟದ “ಸ್ವಚ್ಚತಾ ವಿದ್ಯಾಲಯ” ಪ್ರಶಸ್ತಿ ಲಭಿಸಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ರವರು ತಮ್ಮ ಕಛೇರಿಯಲ್ಲಿ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದೇವೆಂದ್ರಪ್ಪರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.

ಈ ಸಂಧರ್ಭದಲ್ಲಿ ಬಿದರಹಳ್ಳಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಪದ್ಮರಾಜ್, ಶಾಲೆಯ ಶಿಕ್ಷಕರಾದ ಮಧುಕುಮಾರ್,ದಿನೇಶ್ ರವರು ಉಪಸ್ಥಿತರಿದ್ದರು.

ಬಿದರಹಳ್ಳಿ ಶಾಲೆಯ ಹಿನ್ನೋಟ :

ಸರ್ಕಾರಿ ಶಾಲೆ ಎಂದು ಮೂಗು ಮುರಿಯುವವರೆಲ್ಲ ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿ ಶಾಲೆಗೆ ಒಮ್ಮೆ ಭೇಟಿ ನೀಡಬೇಕು. ಮೂಗಿನ ಮೇಲೆ ಬೆರಳಿಟ್ಟುಕೊಂಡು ಅಹುದಹುದು ಎನ್ನದಿದ್ದರೆ ಹೇಳಿ!


ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ಮಲೆನಾಡಿನ ಹಳ್ಳಿಯೊಂದು ರಾಜ್ಯದಲ್ಲಿ ಗುರುತಿಸಿಕೊಂಡಿದೆ.

ಶಿಕ್ಷಕರ ನಿಸ್ವಾರ್ಥ ಸೇವೆ, ಶಿಕ್ಷಣ  ಪ್ರೇಮ, ಊರವರ ಸಹಾಯ-ಸಹಕಾರ ಸೇರಿದರೆ ಸರ್ಕಾರಿ ಶಾಲೆಯೊಂದು ಹೇಗೆ ಅಭಿವೃದ್ಧಿ ಪಥದಲ್ಲಿ ಸಾಗಬಹುದು ಎಂಬುದಕ್ಕೆ ಉತ್ತರವಾಗಿ ನಿಲ್ಲುತ್ತದೆ ಬಿದರಹಳ್ಳಿಯ ಈ ಸರ್ಕಾರಿ ಶಾಲೆ.

ಶಾಲೆಯ ಮುಂದಿನ ಕೈದೋಟದಲ್ಲಿ ಹಲವು ಜಾತಿಗಳ ಬಣ್ಣ ಬಣ್ಣದ ಹೂಗಳು. ತೋಟದ ರಕ್ಷಣೆಗಾಗಿಯೇ ನಿರ್ಮಿಸಿದ ಹೂಬಳ್ಳಿಯ ಬೇಲಿ. ಉದ್ಯಾನದಲ್ಲಿ ಸಿಮೆಂಟ್‌ನಿಂದ ತಯಾರಾದ ಬಗೆಬಗೆಯ ಪ್ರಾಣಿಗಳು, ಜಿಂಕೆ, ಮೊಲ, ನವಿಲು, ಸಾಹಿತಿಗಳ ಕಲಾಕೃತಿಗಳು, ವಿಶಾಲವಾದ ಆಟದ ಮೈದಾನ.  ಶಾಲೆಯ ಆವರಣದ ಸುತ್ತ ಹಚ್ಚು ಹಸಿರಿನಿಂದ ಕಂಗೊಳಿಸುವ ಸುಮಾರು ಬಗೆಬಗೆಯ ಗಿಡಗಳು. ಶಾಲಾ ಮುಂಭಾಗದ ಕಟ್ಟಡಕ್ಕೆ ಬರೆಯಲಾದ ವಿವಿಧ ಮಾಹಿತಿ ಫ‌ಲಕಗಳು. ಮಧ್ಯದಲ್ಲಿ ಸುಂದರ ರಂಗಸಜ್ಜಿಕೆ. ನೋಡಲೆರಡು ಕಣ್ಣು ಸಾಲದು. ಮಕ್ಕಳಿಗೆ ಶಾಲೆಗೆ ಬರುವುದೆಂದರೆ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ ಅನುಭವ.

               ಬಿದರಹಳ್ಳಿ ಶಾಲೆಯ ಶಿಕ್ಷಕರುಗಳು



ಮುಖ್ಯೋಪಾಧ್ಯಾಯರಾಗಿ 2011ರಲ್ಲಿ ಬಂದ ಬಿ ದೇವೆಂದ್ರಪ್ಪ  ಅವರ ದಕ್ಷ ಆಡಳಿತ ಇವತ್ತು ಶಾಲೆಯನ್ನು ರಾಜ್ಯಮಟ್ಟದಲ್ಲಿ ಮೊದಲು ನಿಲ್ಲಿಸುವಂತೆ ಮಾಡಿದೆ.ಇವರ ಆಶಯಗಳಿಗೆ ಸಹಕರಿಸಿದ ಸಹ ಶಿಕ್ಷಕರುಗಳಾದ ಮಧುಕರ್,ದಿನೇಶ್,ಆಯಿಷಾ ಹಾಗೂ ಸೌಮ್ಯ ರವರ ಸಹಕಾರದಿಂದ ಎಲ್ಲ ಶಾಲೆಗಳಿಗಿಂತ ವಿಭಿನ್ನವಾಗಿ ಹೆಜ್ಜೆ ಹಾಕಿ, ಶೈಕ್ಷಣಿಕ, ನೈತಿಕ ಗುಣಮಟ್ಟ ಹೆಚ್ಚುವಂತೆ ಮಾಡಿದೆ.ರಜಾದಿನಗಳಲ್ಲಿಯೂ ಶಿಕ್ಷಕರು ಮಕ್ಕಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಬಗ್ಗೆ ಹೇಳಿಕೊಡುವುದು ಅವರ ಸೇವಾ ದಕ್ಷತೆ. ಶಿಕ್ಷಣ ಪ್ರೇಮಕ್ಕೆ ಸಾಕ್ಷಿ.

ಒಟ್ಟಾರೆ ಊರು ಒಂದು ಗೂಡಿದರೆ ಏನು ಬೇಕಾದರೂ ಮಾಡಬಹುದು ಅನ್ನೋದನ್ನು ಬಿದರಹಳ್ಳಿ ಗ್ರಾಮದ ಜನರು ಸಾಧಿಸಿ ತೋರಿಸಿದ್ದಾರೆ.ಹಳ್ಳಿಯ ಸರ್ಕಾರಿ ಶಾಲೆಯೊಂದರ ಹೆಸರು ನಾಡಿನಲ್ಲಿ ಹೆಸರು ಮಾಡಿದೆ ಎಂದರೆ ಅದಕ್ಕೆ ಆ ಊರವರ ಸಹಕಾರ ಖಂಡಿತ ದೊಡ್ಡದಾಗಿರಬೇಕು.

ಶಾಲೆಯ ಶಿಕ್ಷಕರು, ಪೋಷಕರು, ಜನಪ್ರತಿನಿಧಿಗಳು, ಶಾಲಾಭಿವದ್ಧಿ ಸಮಿತಿಯ ಸದಸ್ಯರು, ಶಿಕ್ಷಣ ಸಂಯೋಜಕರು, ಕ್ಷೇತ್ರಶಿಕ್ಷಣಾಧಿಕಾರಿಗಳು ಎಲ್ಲಾ ಸೇರಿ ಒಮ್ಮನಸ್ಸಿನಿಂದ ಶಾಲೆಯ ಅಭಿವದ್ಧಿಗೆ ದುಡಿದಿದ್ದೇವೆ. ಶಾಲೆಯೇ ನಮ್ಮ ನಿತ್ಯದ ಚಿಂತನೆಯ ವಿಷಯ, ವಾರಕೊಮ್ಮೆ ಶಾಲೆಯ ಭೇಟಿ, ತಿಂಗಳಿಗೊಂದು ಶಾಲೆಯ ಪಾಲಕರ, ಶಾಲಾಭಿವದ್ಧಿ ಸಮಿತಿಯ ಸದಸ್ಯರ ಸಭೆಯನ್ನು ಕಡ್ಡಾಯವಾಗಿ ನಿಯಮಿತವಾಗಿ ನಡೆಸುತ್ತೇವೆ ಎಂದು ಶಾಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವುಕುಮಾರ್ ಹಾಗೂ ಸಮಿತಿಯ ಸದಸ್ಯರುಗಳಾದ ರಾಜೇಶ್,ಪುರುಷೋತ್ತಮ್, ದಾನಪ್ಪ ಮತ್ತು ರಾಘವೇಂದ್ರ ಒಕ್ಕೊರಲಿನಿಂದ  ಹೇಳುತ್ತಾರೆ.

78 ವಿದ್ಯಾರ್ಥಿಗಳು ಕಲಿಯುತ್ತಿರುವ ಈ ಸರ್ಕಾರಿ ಶಾಲೆಯಲ್ಲಿ ಕಲಿಸಲು ಐದು ಜನ ಅತ್ಯುತ್ತಮ ಶಿಕ್ಷಕರಿದ್ದಾರೆ.ಸೌರಚಾಲಿತ ಪಠ್ಯಾಧಾರಿತ ಸ್ಮಾರ್ಟ್ ಕ್ಲಾಸ್, ಹೈಟೆಕ್ ಶೌಚಾಲಯ , ಸಾಕಷ್ಟು ಸುಸಜ್ಜಿತ ಕೊಠಡಿಗಳು, ಕಲಿಕೋಪಕರಣಗಳು, ಪೀಠೋಪಕರಣಗಳು, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ವ್ಯವಸ್ಥೆ, ಜೆರಾಕ್ಸ್ ವ್ಯವಸ್ಥೆ ಎಲ್ಲವೂ ಇದ್ದು ವಿದ್ಯಾರ್ಥಿಗಳು ನಗುಮುಖದಿಂದ ಕಲಿಕೆಯಲ್ಲಿ ನಿರತರಾಗುರುವುದನ್ನು ಕಂಡಾಗ, ಶಾಲೆಯ ಸುಂದರ ಕಟ್ಟಡಗಳು,ಉದ್ಯಾನವನ್ನು ನೋಡುವಾಗ ಯಾರಿಗಾದರೂ ಆನಂದವಾಗಲೇಬೇಕು. ಉದ್ಯಾನವನದಲ್ಲಿ ನಿಮ್ಮನ್ನು ಕೈ ಬೀಸಿ ಕರೆಯುವ ಸರ್ವ ಸಿದ್ಧಿವಿನಾಯಕನ ವಿಗ್ರಹ,ತರಗತಿಯ ಮುಂಭಾಗ ಅಳವಡಿಸಿರುವ ನಾಮಫಲಕಗಳು ಹೆಚ್ಚು ಆಕರ್ಷಿತವಾಗಿಸುತ್ತದೆ. ಇಷ್ಟು ಮಾತ್ರವಲ್ಲ ಶಾಲೆಗೆ ಪ್ರತ್ಯೇಕವಾಗಿ ಸುಸಜ್ಜಿತ ಸೈಕಲ್ ನಿಲ್ದಾಣವು ಇದೆ.

ಖಾಸಗಿ ಶಾಲೆಯತ್ತ ಆಕರ್ಷಿತರಾಗುವ ಈ ಸಂಧರ್ಭದಲ್ಲಿ ಸರ್ಕಾರಿ ಶಾಲೆಯೊಂದು ಶಿಕ್ಷಕರ ಹಾಗೂ ಗ್ರಾಮಸ್ಥರ ಸಹಕಾರದಿಂದ ಎಂಥಹ ಬಲಿಷ್ಠ ಖಾಸಗಿ ಶಾಲೆಗೂ ಸೆಡ್ಡು ಹೊಡೆಯುವ ರೀತಿಯಲ್ಲಿ ಬೆಳೆದು ನಿಂತಿರುವುದು ಹೆಮ್ಮೆಯ ಸಂಗತಿಯಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

14 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

21 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

2 days ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

2 days ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

2 days ago