ಭದ್ರಾವತಿಯ ಹುಣಸೇಕಟ್ಟೆ ಜಂಕ್ಷನ್ ಬಳಿ ರಸ್ತೆ ಅಪಘಾತವಾಗಿದ್ದು ಕುವೆಂಪು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ನಿನ್ನೆ ರಾತ್ರಿ 10-30 ರ ಸಮಯದಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉತ್ತಮ ಚಕ್ರವರ್ತಿ, ಮನೋಜ್ ಎಂಬ ಇಬ್ಬರು ಯುವಕರು ಶಂಕರಘಟ್ಟದಿಂದ ಭದ್ರಾವತಿಗೆ ಹೋಗುವಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಉತ್ತಮ ಚಕ್ರವರ್ತಿ ಮತ್ತು ಮನೋಜ್ ಇಬ್ಬರು ಎನ್ ಆರ್ ಪುರದ ನಿವಾಸಿಗಳಾಗಿದ್ದು, ಉತ್ತಮ್ ಚಕ್ರವರ್ತಿ ಎಂಸಿಎ ದ್ವಿತೀಯ ವರ್ಷದಲ್ಲಿ ಓದುತ್ತಿದ್ದರೆ, ಮನೋಜ್ ಎಂಕಾಂನಲ್ಲಿ ಓದುತ್ತಿದ್ದರು.
ಪ್ರಕರಣ ಭದ್ರಾವತಿ ಗ್ರಾಮಾಂತರ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್