Headlines

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.1.00 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಆದಾಯ ಮಿತಿ ರೂ.44,500 ಗಳು ಇರುತ್ತದೆ.

ಅರ್ಜಿ ಸಲ್ಲಿಸಲು ಹಾಗೂ ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ www.bcwd.karnataka.gov.in ನ್ನು ವೀಕ್ಷಿಸುವುದು. 

ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಹಾಗೂ ಸಹಾಯವಾಣಿ ಸಂಖ್ಯೆ 080-65970006/08182-222129/08182-240078 ಗಳನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ  ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *