ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿ ಆದಾಯ ಮಿತಿ ರೂ.1.00 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಆದಾಯ ಮಿತಿ ರೂ.44,500 ಗಳು ಇರುತ್ತದೆ.
ಅರ್ಜಿ ಸಲ್ಲಿಸಲು ಹಾಗೂ ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ www.bcwd.karnataka.gov.in ನ್ನು ವೀಕ್ಷಿಸುವುದು.
ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಹಾಗೂ ಸಹಾಯವಾಣಿ ಸಂಖ್ಯೆ 080-65970006/08182-222129/08182-240078 ಗಳನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್