ಶಿವಮೊಗ್ಗ : ನಾನು ಶಿವಮೊಗ್ಗದಲ್ಲಿ ಯಾವುದೇ ಕಾರಣಕ್ಕೂ ಮುಸ್ಲೀಂ ಜನರ ಬಳಿ ಮತ ಕೇಳುವುದಿಲ್ಲವೆಂದು ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.
ಅವರು ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಮುಸ್ಲೀಂ ಮತಗಳ ಮೇಲೆ ಬಿಜೆಪಿ ಅವಲಂಬಿತವಾಗಿಲ್ಲ. ನಾನಂತು ಯಾವುದೇ ಕಾರಣಕ್ಕೂ ಶಿವಮೊಗ್ಗದಲ್ಲಿ ಮುಸ್ಲೀಂ ಜನರ ಮತವನ್ನ ಕೇಳೊಲ್ಲ. 60 ಬೂತ್ ಗಳಲ್ಲಿ ಮುಸ್ಲೀಂ ಮತಗಳು ಬಿದ್ದಿವೆ. ಆದರೆ ವಿರೋಧ ಪಕ್ಷಗಳು ಮುಸ್ಲೀಂ ಮತಗಳ ಮೇಲೆ ಕಣ್ಣಿಟ್ಟು ಅವರನ್ನ ಓಲೈಸುತ್ತಿದೆ. ಹಾಗಾಗಿ ಆರ್ ಎಸ್ ಎಸ್ ನ್ನ ಬೈದರೆ ಸ್ವರ್ಗಕ್ಕೆ ಹೋಗ್ತೀವಿ ಅಂತ ತಿಳಿದುಕೊಂಡಿದ್ದಾರೆ. ಹಾಗೆ ಸ್ವರ್ಗಕ್ಕೆ ಹೋಗಲಿ ಎಂದರು
ನಂತರ ಮಹಾರಾಷ್ಟ್ರ ವಿಷಯದಲ್ಲಿ ನಿಮ್ಮ ಶಾಸಕರನ್ನ ಶಿಸ್ತುಬದ್ಧವಾಗಿ ಇಟ್ಟುಕೊಂಡರೆ ನಿಮ್ಮನ ಬಿಟ್ಟು ಯಾಕೆ ಹೋಗ್ತಾರೆ? ಮಹಾರಾಷ್ಟ್ರದಲ್ಲಿ ಈ ಮೊದಲು ಶಾಸಕರು ಸಚಿವರ ಕೈಗೆ ಸಿಎಂ ಸಿಗ್ತಾ ಇರಲಿಲ್ಲವೆಂಬ ಆರೋಪವಿತ್ತು. ಈಗ ಅದನ್ನು ಸರಿಪಡಿಸಿಕೊಳ್ತೀವಿ ಎಂದು ಅವರೇ ಒಪ್ಪಿಕೊಂಡಿದ್ದಾರೆ ಅಂದರೆ ಮೊದಲು ತಪ್ಪು ಮಾಡಿದ್ದಾರೆ ಎಂದು ಮಹಾ ಸರ್ಕಾರ ಒಪ್ಪಿಕೊಂಡಂತೆ ಎಂದರು.
ಮುಖ್ಯಮಂತ್ರಿ ಸ್ಥಾನ ಇರೋದು ಒಂದೇ ಅದು ಬಿಜೆಪಿಗೆ ಮೀಸಲು ಎಂದು ಸ್ಪಷ್ಟಪಡಿಸಿದರು.ರಾಜ್ಯದಲ್ಲಿ ಬಿಜೆಪಿಯಲ್ಲಿ ಮೊದಲು 4 ನೇ ಜನ ಇದ್ವಿ, 4 ರಿಂದ 40 ರಿಂದ 80 ಆಗಿ ಈಗ ಅಧಿಕಾರಕ್ಕೆ ಬಂದಿದ್ದೇವೆ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಇರಬೇಕು. ಆದರೆ ಇಲ್ಲಿ ವಿಪಕ್ಷಗಳು ಇಲ್ಲವೆಂದರೆ ನಾವೇನು ಮಾಡೋಣ. ಕೆಲಸ ಮಾಡದೆ ಕೇವಲ ಆರ್ ಎಸ್ ಎಸ್ ಗೆ ಬೈದುಕೊಂಡು ಓಡಾಡುತ್ತಿದ್ದಾರೆ ಎಂದು ದೂರಿದರು.
ಆರ್ ಎಸ್ ಎಸ್ ಗೆ ಕಮಿಷನ್ ಹೋಗ್ತಾ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯನವರ ದಾರಿಯಲ್ಲಿ ಕುಮಾರಸ್ವಾಮಿ ಹೋಗಲು ಮುಂದಾಗಿದ್ದಾರೆ ಎಂದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್