ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರು ಇಂದು ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾದ ಆದರ್ಶ ಹುಂಚದಕಟ್ಟೆಯವರ ಮನೆಗೆ ಭೇಟಿ ನೀಡಿದ್ದರು.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಯಲ್ಲಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆರವರ ಮನೆಗೆ ದಿಡೀರ್ ಭೇಟಿ ನೀಡಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿದ್ದ ರಾಹುಲ್ ಗಾಂಧಿಯವರ ಮೇಲಿನ ಈಡಿ ವಿಚಾರಣೆ ಅಗ್ನಿಪಥ್ ಯೋಜನೆಗಳನ್ನು ವಿರೋಧಿಸಿ ಪ್ರತಿಭಟನೆಗಳಲ್ಲಿ ತೊಡಗಿಸಿಕೊಂಡಿದ್ದ ಬಿ ವಿ ಶ್ರೀನಿವಾಸ್ ರವರ ದಿಡೀರ್ ಭೇಟಿ ಕುತೂಹಲ ಕೆರಳಿಸಿದೆ. ದೇಶದಾದ್ಯಂತ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ದೇಶ್ ಜೋಡೊ ಕಾರ್ಯಕ್ರಮದ ರೂಪುರೇಷಗಳನ್ನು ಸಿದ್ದಪಡಿಸುತ್ತಿರುವ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರು ಇದರ ಸಂಬಂಧಿತ ಚರ್ಚೆಗೆ ಕರ್ನಾಟಕದ ಮೂಲೆ ಮೂಲೆಗೂ ಭೇಟಿ ನೀಡುತ್ತಿದ್ದು, ಇದಕ್ಕಾಗಿಯೇ ಆದರ್ಶ ಹುಂಚದಕಟ್ಟೆಯವರ ಮನೆಗೆ ಭೇಟಿ ನೀಡಿದ್ದರು ಎನ್ನಲಾಗಿದೆ.ಕಾಂಗ್ರೆಸ್ ಪಕ್ಷ ಯುವಕರ ಧ್ವನಿಯಾಗುವ ಬಗ್ಗೆಯು ಮಹತ್ವದ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.
ಭವಿಷ್ಯದ ಕಾಂಗ್ರೆಸ್ ಕಟ್ಟುವಲ್ಲಿ ಮುಂದಿನ ದಿನಗಳಲ್ಲಿ ಮಲೆನಾಡ ಯುವಕನಿಗೆ ಮಹತ್ವದ ಜವಾಬ್ಧಾರಿ ಸಿಗಬಹುದು ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಒಟ್ಟಿನಲ್ಲಿ ಆದರ್ಶ ಹುಂಚದಕಟ್ಟೆಯವರ ಮನೆಗೆ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರ ದಿಡೀರ್ ಭೇಟಿ ಮತ್ತು ಮಹತ್ವದ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಮೂಡಿಸಿದೆ.