ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆ ರವರ ಮನೆಗೆ ದಿಡೀರ್ ಭೇಟಿ ನೀಡಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್

ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರು ಇಂದು ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾದ ಆದರ್ಶ ಹುಂಚದಕಟ್ಟೆಯವರ ಮನೆಗೆ ಭೇಟಿ ನೀಡಿದ್ದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಯಲ್ಲಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆರವರ ಮನೆಗೆ ದಿಡೀರ್ ಭೇಟಿ ನೀಡಿದ್ದಾರೆ.


ದೆಹಲಿಯಲ್ಲಿ ನಡೆಯುತ್ತಿದ್ದ ರಾಹುಲ್ ಗಾಂಧಿಯವರ ಮೇಲಿನ ಈಡಿ ವಿಚಾರಣೆ  ಅಗ್ನಿಪಥ್ ಯೋಜನೆಗಳನ್ನು ವಿರೋಧಿಸಿ ಪ್ರತಿಭಟನೆಗಳಲ್ಲಿ ತೊಡಗಿಸಿಕೊಂಡಿದ್ದ ಬಿ ವಿ ಶ್ರೀನಿವಾಸ್ ರವರ ದಿಡೀರ್ ಭೇಟಿ ಕುತೂಹಲ ಕೆರಳಿಸಿದೆ. ದೇಶದಾದ್ಯಂತ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ದೇಶ್ ಜೋಡೊ ಕಾರ್ಯಕ್ರಮದ ರೂಪುರೇಷಗಳನ್ನು ಸಿದ್ದಪಡಿಸುತ್ತಿರುವ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರು ಇದರ ಸಂಬಂಧಿತ ಚರ್ಚೆಗೆ ಕರ್ನಾಟಕದ ಮೂಲೆ ಮೂಲೆಗೂ ಭೇಟಿ ನೀಡುತ್ತಿದ್ದು, ಇದಕ್ಕಾಗಿಯೇ ಆದರ್ಶ ಹುಂಚದಕಟ್ಟೆಯವರ ಮನೆಗೆ ಭೇಟಿ ನೀಡಿದ್ದರು ಎನ್ನಲಾಗಿದೆ.ಕಾಂಗ್ರೆಸ್ ಪಕ್ಷ ಯುವಕರ ಧ್ವನಿಯಾಗುವ ಬಗ್ಗೆಯು ಮಹತ್ವದ ಚರ್ಚೆ ನಡೆಸಿದರು ಎಂದು  ತಿಳಿದುಬಂದಿದೆ. 

ಭವಿಷ್ಯದ ಕಾಂಗ್ರೆಸ್ ಕಟ್ಟುವಲ್ಲಿ ಮುಂದಿನ ದಿನಗಳಲ್ಲಿ ಮಲೆನಾಡ ಯುವಕನಿಗೆ ಮಹತ್ವದ ಜವಾಬ್ಧಾರಿ ಸಿಗಬಹುದು ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಒಟ್ಟಿನಲ್ಲಿ ಆದರ್ಶ ಹುಂಚದಕಟ್ಟೆಯವರ ಮನೆಗೆ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರ ದಿಡೀರ್ ಭೇಟಿ ಮತ್ತು ಮಹತ್ವದ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಮೂಡಿಸಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

42 minutes ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

5 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

7 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

19 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

19 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

22 hours ago