January 11, 2026

ಯುವ ಕಾಂಗ್ರೆಸ್ ವತಿಯಿಂದ ರಾಜಭವನ ಮುತ್ತಿಗೆ ಯತ್ನ : ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ -ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ನಿಹಾಲ್ ಬಂಧನ

ಕರ್ನಾಟಕ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ರಾಜಭವನ್ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೊಸನಗರ ತಾಲೂಕಿನ ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ ಹಾಗೂ ಜಿಲ್ಲಾ ಯುವ  ಕಾಂಗ್ರೆಸ್ ಕಾರ್ಯದರ್ಶಿ ಮೊಹಮ್ಮದ್ ನಿಹಾಲ್ ರವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಲಾಯಿತು.

ಬೆಂಗಳೂರು ಕೆಪಿಸಿಸಿ ಕಛೇರಿಯಿಂದ ರಾಜಭವನಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಲಪಾಡ್ ರವರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ರಾಜಭವನ ಮುತ್ತಿಗೆ ಹಾಕುವ ಸಂದರ್ಭದಲ್ಲಿ  ಯುವ ಕಾಂಗ್ರೆಸ್ ನ ಹಲವಾರು ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಈ ಸಂಧರ್ಭದಲ್ಲಿ ಶಿವಮೊಗ್ಗ ಜಿಲ್ಲೆ  ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ ಹಾಗೂ ಮೊಹಮ್ಮದ್ ನಿಹಾಲ್ ರವರನ್ನು ಚಾಮರಾಜಪೇಟೆ ಪೋಲಿಸರು ಬಂಧಿಸಿ ಕೆಲವು ಗಂಟೆಗಳ ನಂತರ ಬಿಡುಗಡೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸದ್ದಮ್ ಹುಸೇನ್ ಮತ್ತು ಮುಂತಾದ ಯುವ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

About The Author

Leave a Reply

Your email address will not be published. Required fields are marked *

Exit mobile version