ರಿಪ್ಪನ್ ಪೇಟೆ : ಸಮೀಪದ ಗವಟೂರು ಕೆರೆ ಬಳಿ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.
ಹೊಸನಗರ ಕಡೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ (KA 15 W 3356) ಟಿವಿಎಸ್ ಬೈಕ್ ಹಾಗೂ ರಿಪ್ಪನ್ ಪೇಟೆಯಿಂದ ಹೊಸನಗರ ಕಡೆಗೆ ತೆರಳುತ್ತಿದ್ದ ಟಿವಿಎಸ್ ಬೈಕ್(KA 15 ED 5303) ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದ ರಭಸಕ್ಕೆ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.ಇನ್ನೊರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.
ಮೃತ ವ್ಯಕ್ತಿ ಹಾಗೂ ಗಂಭೀರ ಸ್ಥಿತಿಯಲ್ಲಿರುವ ವ್ಯಕ್ತಿ ತಂದೆ ಮಗ ಎಂದು ಹೇಳಲಾಗುತ್ತಿದೆ. ಎದುರುಗಡೆ ಬೈಕ್ ನಲ್ಲಿ ಇದ್ದವರು ಆಚಾಪುರ ನಿವಾಸಿ ರಾಜು ಎಂದು ತಿಳಿದುಬಂದಿದ್ದು.ರಾಜು ರವರಿಗೆ ಕಾಲು ಮುರಿತವಾಗಿದೆ.
ಮೃತಪಟ್ಟ ವ್ಯಕ್ತಿಯ ಶವವನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇರಿಸಲಾಗಿದೆ.
ಮೃತ ವ್ಯಕ್ತಿ ಹಾಗೂ ಗಂಬೀರ ಸ್ಥಿತಿಯಲ್ಲಿರುವ ವ್ಯಕ್ತಿಯನ್ನು ಹೊನ್ನೆಬೈಲ್ ಗ್ರಾಮದವರೆಂದು ಹೇಳಲಾಗುತಿದ್ದು.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್