ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಮಾನಸಳಿಗೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ದೊರೆತಿದೆ.
ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹೊಸನಗರದಲ್ಲಿ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ ಮಾಸಾಚರಣೆ ಅಂಗವಾಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮಾನಸ.ಕೆ.ಎಂ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಸೋಮವಾರ ಶಿವಮೊಗ್ಗದಲ್ಲಿ ಜಿಲ್ಲಾ ರಕ್ಷಣಾ ಇಲಾಖೆಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು