ರಿಪ್ಪನ್‌ಪೇಟೆ ಸಮೀಪದ ಅಬ್ಬಿಗುಂಡಿಯಲ್ಲಿ ಕಾಲುಜಾರಿ ಹೊಳೆಯಲ್ಲಿ ಬಿದ್ದು ಪಿಯುಸಿ ವಿದ್ಯಾರ್ಥಿ ಸಾವು

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಶಾಂತಪುರ ಬಳಿ ಅಬ್ಬಿಗುಂಡಿ ಎಂಬ ಹೊಳೆಯಲ್ಲಿ ಕಾಲು ಜಾರಿ ನೀರಿನ ಸುಳಿಗೆ ಸಿಲುಕಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.


ಶಾಂತಪುರ ಸಮೀಪದ ಸಿದ್ಧಗಿರಿ ನಿವಾಸಿ ಕೋರೆ ಮಂಜಣ್ಣ ಇವರ ಪುತ್ರ ಕಿರಣ್(17)  ಮೃತಪಟ್ಟ ದುರ್ದೈವಿಯಾಗಿದ್ದಾನೆ .ಈತನು ಹೊಸನಗರ ಸರ್ಕಾರಿ ಕಾಲೇಜಿನಲ್ಲಿ  ಪಿಯುಸಿ ವ್ಯಾಸಂಗ ಮಾಡುತ್ತಿದ್ದನು.

ಇಂದು ಮಧ್ಯಾಹ್ನ ಹನ್ನೆರಡು ಗಂಟೆ ಸುಮಾರಿಗೆ ಸ್ನೇಹಿತ ಯಶವಂತ್ ಎಂಬಾತನೊಂದಿಗೆ ಶಾಂತಪುರ ಸಮೀಪದ ಅಬ್ಬಿಗುಂಡಿ ಹೊಳೆಯ ಸಮೀಪ ಹೋದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.


ಈ ದುರ್ಘಟನೆ ನಡೆದ ತಕ್ಷಣ ಆತನ ಜೊತೆಗಿದ್ದ ಸ್ನೇಹಿತ ಯಶವಂತ್ ಹೊಳೆಯ ಸಮೀಪವಿದ್ದ ಮನೆಯವರಿಗೆ ಮಾಹಿತಿ ತಿಳಿಸಿದ್ದಾನೆ.

ಯವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಕೆ ಕರೆತರಲಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಾರ್ವಜನಿಕರಿಗೆ ನಿಷೇದಕ್ಕೆ ಆಗ್ರಹ :

ಈ ಅಬ್ಬಿಗುಂಡಿ ಹೊಡದಲ್ಲಿ ಅನೇಕ ಜನರು ಪ್ರಾಣವನ್ನು ಕಳೆದುಕೊಂಡಿದ್ದು ಸ್ಥಳೀಯಾಡಳಿತ ಈ ಪ್ರದೇಶಕ್ಕೆ ಸಾರ್ವಜನಿಕರು ಪ್ರವೇಶ ಮಾಡುವುದಕ್ಕೆ ನಿಷೇಧ ಹೇರಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

42 minutes ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

5 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

7 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

19 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

19 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

22 hours ago