ರಿಪ್ಪನ್ ಪೇಟೆ ಸುತ್ತಮುತ್ತ ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದ ಆಕಾಶವನ್ನು ನೋಡುತ್ತಿರುವ ಮೊಬೈಲ್ ಗ್ರಾಹಕರುಗಳು….!ಸಿಡಿದೆದ್ದು ಮೊಬೈಲ್ ಸೇವಾ ಕೇಂದ್ರಗಳಿಗೆ ಬೀಗ ಜಡಿಯಲು ಸನ್ನದ್ಧರಾಗುತ್ತಿರುವ ಗ್ರಾಹಕರುಗಳು..!!???

ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರಮುಖ ಪಟ್ಟಣಗಳಲ್ಲಿ ಒಂದಾದ ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮದ ಮೊಬೈಲ್ ಗ್ರಾಹಕರುಗಳು  ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಆಕಾಶವನ್ನು ನೋಡುತ್ತಿದ್ದಾರೆ.

ಗ್ರಾಹಕರ ಸಮಸ್ಯೆಗೆ ಸ್ಪಂದಿಸದ ಸೇವಾ ಕೇಂದ್ರಗಳು :

ರಿಪ್ಪನ್ ಪೇಟೆ ಯಲ್ಲಿ ಖಾಸಗಿ ಮೊಬೈಲ್ ಕಂಪನಿಗಳಾದ ಏರ್ ಟೆಲ್, ಜಿಯೋ ಸೇರಿದಂತೆ ಬಿಎಸ್ಎನ್ಎಲ್  ಸೇವಾ ಕೇಂದ್ರಗಳು ಇದ್ದರೂ ಸಹ ದಿನನಿತ್ಯ ನೂರಾರು ಬಾರಿ ಮೊಬೈಲ್ ನೆಟ್ವರ್ಕ್ ಗಳ ಸಮಸ್ಯೆಗಳು ಉಂಟಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಸೇವಾಕೇಂದ್ರದ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರುಗಳನ್ನು ಸಲ್ಲಿಸಿದರು ಸಹ ಗ್ರಾಹಕರ ಮನವಿಗೆ  ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ ಎಂದು ಗ್ರಾಹಕರು ದೂರುತ್ತಿದ್ದಾರೆ.

ಹೈರಾಣಾಗುತ್ತಿರುವ ಆಗುತ್ತಿರುವ ಮೊಬೈಲ್ ಗ್ರಾಹಕರುಗಳು :

ಖಾಸಗಿ ಕಂಪನಿಗಳು ಹಾಗೂ ಸರಕಾರಿ ಸ್ವಾಮ್ಯದ ಕಂಪನಿಗಳು ಪಟ್ಟಣದಲ್ಲಿ  ಮೊಬೈಲ್ ಟವರ್ ಗಳನ್ನು ನಿರ್ಮಿಸಿದ್ದರು ಸಹ ಮೊಬೈಲ್ ನೆಟ್ ವರ್ಕ್ ಸಮಸ್ಯೆ ಇನ್ನೂ ಸಹ ಬಗೆಹರಿದಿಲ್ಲ. ಮೊಬೈಲ್ ಕಂಪನಿಗಳ ಜಾಹಿರಾತು, ಸೇವಾಕೇಂದ್ರದ ಪ್ರತಿನಿಧಿಗಳು ಮೊಬೈಲ್ ಸೇವೆಯ ಕುರಿತು  ಕೊಟ್ಟ ಸುಳ್ಳು ಭರವಸೆಗಳಿಗೆ  ಮತ್ತು ಪ್ರಚಾರಕ್ಕೆ ಮರುಳಾದ ಗ್ರಾಹಕರುಗಳು ಸಾವಿರಾರು ರೂಪಾಯಿಗಳ ಮೌಲ್ಯದ ಮೊಬೈಲ್ ಗಳನ್ನು ಕೊಂಡುಕೊಂಡು ನೂರಾರು ರೂಪಾಯಿಗಳ  ಮೌಲ್ಯದ ಕರೆನ್ಸಿಯನ್ನು ಹಾಕಿಕೊಂಡು ನೆಟ್ ವರ್ಕ್ ಸಮಸ್ಯೆಯಿಂದ ಹೈರಾಣಾಗುತ್ತಿದ್ದಾರೆ.

ಸರ್ಕಾರಿ ಕಚೇರಿಗಳ ಹಾಗೂ ಖಾಸಗಿ ಸಂಸ್ಥೆಗಳ ಎಲ್ಲಾ ಕೆಲಸ ಕಾರ್ಯಗಳು   ಕಂಪ್ಯೂಟರ್ ಕೃತ ವಾಗಿರುವುದರಿಂದ  ದಿನನಿತ್ಯ ಸರ್ಕಾರಿ ಕಚೇರಿಗಳಿಗೆ ವಿವಿಧ ಕಾರ್ಯನಿಮಿತ್ತ  ಬರುವ ನಾಗರಿಕರುಗಳಿಗೆ ವಿದ್ಯಾರ್ಥಿಗಳಿಗೆ ನೆಟ್ ವರ್ಕ್ ಸಮಸ್ಯೆಗಳಿಂದ  ಪರಿತಪಿಸುತ್ತಿದ್ದಾರೆ. ಅದರಲ್ಲೂ ನಾಡ ಕಚೇರಿ, ಸರಕಾರಿ ಸ್ವಾಮ್ಯದ ಹಾಗೂ ಖಾಸಗಿ ಬ್ಯಾಂಕುಗಳು. ಆಸ್ಪತ್ರೆಗಳು. ಪಂಚಾಯಿತಿ. ಕೃಷಿ ಇಲಾಖೆ ಆರೋಗ್ಯ ಇಲಾಖೆ. ಹಾಗೂ ಶಾಲಾ-ಕಾಲೇಜುಗಳಿಗೆ ವಿವಿಧ ಕಾರ್ಯನಿಮಿತ್ತ ಬರುವ ನಾಗರಿಕರು ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ನೆಟ್ ವರ್ಕ್ ನ ಸಮಸ್ಯೆಗಳನ್ನು ಹೇಳಿ ಹೇಳಿ ಕಚೇರಿ ಅಧಿಕಾರಿಗಳು ಸುಸ್ತಾಗಿ ಹೋಗಿದ್ದಾರೆ.

ಚುನಾಯಿತ ಪ್ರತಿನಿಧಿಗಳ ಮನವಿಗೂ ಸ್ಪಂದಿಸದ ಮೊಬೈಲ್ ಸಂಸ್ಥೆಗಳು :

ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ರವರಿಗೆ  ರಿಪ್ಪನ್ ಪೇಟೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಉಂಟಾಗುತ್ತಿರುವ ಮೊಬೈಲ್ ಸಮಸ್ಯೆಗಳ ಬಗ್ಗೆ ನೂರಾರು ಬಾರಿ ನಾಗರಿಕರು ಮತ್ತು ವಿದ್ಯಾರ್ಥಿಗಳು ಮನವಿಯನ್ನು ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಚುನಾಯಿತ ಪ್ರತಿನಿಧಿಗಳು ಸಂಬಂಧಪಟ್ಟ ಮಂತ್ರಿಗಳಿಗೆ ಹಾಗೂ ಅಧಿಕಾರಿಗಳಿಗೆ ಇಲಾಖೆಗಳಿಗೆ ಖಾಸಗಿ ಮೊಬೈಲ್ ಸಂಸ್ಥೆಗಳಿಗೆ  ನೆಟ್ ವರ್ಕ್ ಸಮಸ್ಯೆ ಬಗೆಹರಿಸುವಂತೆ ಮನವಿಯನ್ನು ಸಲ್ಲಿಸಿದರೂ ಸಹ  ಅವರ ಮನವಿಗಳಿಗೂ  ಸಹ ಸ್ಪಂದಿಸದ ಮೊಬೈಲ್ ಸಂಸ್ಥೆಯವರು ಇದುವರೆಗೂ ನೆಟ್ ವರ್ಕ್ ಸಮಸ್ಯೆಗಳನ್ನು ಬಗೆಹರಿಸಿಲ್ಲ.


ಧಿಮಾಕಿನ ಉತ್ತರ ನೀಡುತ್ತಿರುವ ಸೇವಾಕೇಂದ್ರದ ಪ್ರತಿನಿಧಿಗಳು :

ಮೊಬೈಲ್ ನೆಟ್ವರ್ಕ್ ಸಮಸ್ಯೆಯ ಕುರಿತು ನಾಗರಿಕರು ಹಾಗೂ ವಿದ್ಯಾರ್ಥಿಗಳು ಮೊಬೈಲ್ ಸೇವಾ ಕೇಂದ್ರದ ಪ್ರತಿನಿಧಿಗಳ ಬಳಿಗೆ ಹೋಗಿ ಪ್ರತಿ ತಿಂಗಳು ನೂರಾರು ರೂಪಾಯಿಗಳ ಮೊಬೈಲ್ ಕರೆನ್ಸಿ ಹಾಕಿಸಿಕೊಂಡರು ಸಹ ನೆಟ್ ವರ್ಕ್ ಸಮಸ್ಯೆ ಇದೆ ಎಂದು  ದೂರು ಸಲ್ಲಿಸಿದರೆ ಅವರು ದಿಮಾಕಿನ ಉತ್ತರವನ್ನು ನೀಡಿ ಸಾಗುಹಾಕುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಹಾಗೂ ನಾಗರಿಕರು ದೂರಿದ್ದಾರೆ.

ಸಿಡಿದೆದ್ದು ಮೊಬೈಲ್ ಸೇವಾ ಕೇಂದ್ರಗಳಿಗೆ ಬೀಗ ಜಡಿಯಲು ಸನ್ನದ್ಧರಾಗುತ್ತಿರುವ ಗ್ರಾಹಕರುಗಳು :

ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೊಬೈಲ್ ನೆಟ್ ವರ್ಕ್ ನ ಸಮಸ್ಯೆಗಳು ನಿನ್ನೆ ಮೊನ್ನೆಯದಲ್ಲ ಕಳೆದ ಕೆಲವು ವರ್ಷಗಳಿಂದ ಉಂಟಾಗಿರುವವಂತಹ ಸಮಸ್ಯೆಗಳು ಮೊಬೈಲ್ ಸೇವಾ ಕೇಂದ್ರದ ಪ್ರತಿನಿಧಿಗಳಿಗೆ ಹಾಗೂ ಕಂಪನಿಗಳಿಗೆ ನೂರಾರು ಬಾರಿ ದೂರುಗಳನ್ನು  ಸಲ್ಲಿಸದರು ಸಹ ಕವಡೆ ಕಾಸಿನ ಕಿಮ್ಮತ್ತು ನೀಡದೇ ಇದುವರೆಗೂ ಮೊಬೈಲ್ ನೆಟ್ ವರ್ಕ್ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಮೊಬೈಲ್ ನೆಟ್ ವರ್ಕ್ ಸಮಸ್ಯೆಗಳನ್ನು ಬಗೆಹರಿಸಿ ಉತ್ತಮ ಮೊಬೈಲ್ ನೆಟ್ ವರ್ಕ್ ಸೌಲಭ್ಯವನ್ನು ನೀಡದಿದ್ದರೆ ವಿವಿಧ ಕಂಪನಿಗಳ ಮೊಬೈಲ್ ಸೇವಾ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆಗಳಿಗೆ ಸಜ್ಜಾಗುತಿದ್ದೇವೆ ಎಂದು ಸಾಮಾಜಿಕ ಹೋರಾಟಗಾರ ರವಿ ಆರ್ ಆಚಾರ್ ಗುಡುಗಿದ್ದಾರೆ.

ಮೊಬೈಲ್ ಕಂಪನಿಗಳು ಜಾಹಿರಾತುಗಳಲ್ಲಿ ಭರವಸೆ ನೀಡುವಂತೆ ಉತ್ತಮ ರೀತಿಯಲ್ಲಿ ನೆಟ್ ವರ್ಕ್ ಸೌಲಭ್ಯಗಳನ್ನು ನೀಡುವ ಮೂಲಕ ಗ್ರಾಹಕರ ಜೊತೆ ಸಹಕರಿಸಬೇಕು ಎಂದು ಗ್ರಾಪಂ ಸದಸ್ಯ ಆಸೀಫ಼್ ಭಾಷಾಸಾಬ್ ಮನವಿ ಮಾಡಿದ್ದಾರೆ.

ಒಟ್ಟಾರೆಯಾಗಿ ಕೇವಲ ಹಣ ಪಡೆದು ಕರೆನ್ಸಿ ಹಾಕುವ ಸೇವಾಕೇದ್ರಗಳಲ್ಲಿ ನೆಟ್ ವರ್ಕ್ ಸಮಸ್ಯೆಯನ್ನು ಆಲಿಸಿ ಬಗೆಹರಿಸುವ ಒಬ್ಬರನ್ನು ನಿಯುಕ್ತಿಗೊಳಿಸಿದಲ್ಲಿ ಹಳ್ಳಿಗಾಡಿನಲ್ಲಿರುವ ನೆಟ್ ವರ್ಕ್ ಸಮಸ್ಯೆಗೆ ಪರಿಹಾರ ದೊರಕಬಹುದು.ಇನ್ನಾದರೂ ಮೊಬೈಲ್ ಕಂಪನಿಗಳ ಸೇವಾ ಪ್ರತಿನಿಧಿಗಳು ಹಾಗೂ ಕಂಪನಿಗಳ ಕಾರ್ಯನಿರ್ವಹಣೆ ಅಧಿಕಾರಿಗಳು ಮೊಬೈಲ್ ನೆಟ್ ವರ್ಕ್ ಸಮಸ್ಯೆಗಳನ್ನು ಬಗೆಹರಿಸುತ್ತಾರ ಕಾದುನೋಡಬೇಕು….

ನೆಟ್ ವರ್ಕ್ ಸಮಸ್ಯೆ ಬಗ್ಗೆ ಗ್ರಾಹಕರ ಆರೋಪದ ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

2 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

6 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

8 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

20 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

20 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

22 hours ago